ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್​​​ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

19 Sep 2023

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರನ್ನು ಉದ್ದೇಶಿಸಿ ಮಾತನಾಡಿದರು.

19 Sep 2023

ಕಾರ್ಯಕ್ರಮದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರನ್ನು ಭೇಟಿ ಮಾಡಿದರು.

19 Sep 2023

ಇನ್ನು ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಮಾತನಾಡಿದರು.

19 Sep 2023

ಪ್ರಧಾನಿ ಮೋದಿ, ಕಾಂಗ್ರೆಸ್​​ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಸಮೀಪಕ್ಕೆ ಬರುತ್ತಿದ್ದಂತೆ ಎದ್ದು ನಿಂತು ಕೈಮುಗಿದ್ದರು. 

19 Sep 2023

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಲ್ಲೂ ಮಾತುಕತೆ ನಡೆಸಿದ ಪ್ರಧಾನಿ ಮೋದಿ. ಇಲ್ಲಿ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಕೂಡ ಉಪಸ್ಥಿತಿವಿದ್ದರು.

19 Sep 2023

ಹಳೆಯ ಸಂಸತ್ ಕಟ್ಟಡವನ್ನು ಸಂವಿಧಾನ ಸದನ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

19 Sep 2023

ಹಳೇ ಸಂಸತ್ ಭವನದಲ್ಲಿನ ಕೊನೆಯ ಭಾಷಣದ ನಂತರ ಮೋದಿ, ಎಲ್ಲಾ ಸಂಸದರನ್ನ ಹೊಸ ಸಂಸತ್ತಿನ ಕಟ್ಟಡಕ್ಕೆ ಕರೆದೊಯ್ದರು.

19 Sep 2023

ಇಂದು, ನಾವು ಇದನ್ನು ಬಿಟ್ಟು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಇಂದು ಗಣೇಶ ಚತುರ್ಥಿ ಮಂಗಳಕರ ಎಂದು ಪ್ರಧಾನಿ ಹೇಳಿದರು.

19 Sep 2023