ವಿಜಯ್ ಹಜಾರೆ ಟ್ರೋಪಿಯಲ್ಲಿ  ರುತುರಾಜ್ ಕಾಯಕ್ವಾಡ್ ದಾಖಲೆಯ ದ್ವಿಶತಕ ಸಿಡಿಸಿದ್ದಾರೆ.

ತಮ್ಮ ಇನ್ನಿಂಗ್ಸ್ ನಲ್ಲಿ ಕೇವಲ 159 ಎಸೆತಗಳನ್ನು ಎದುರಿಸಿದ ರುತುರಾಜ್ 10 ಬೌಂಡರಿ, 16 ಸಿಕ್ಸರ್ ನೇರವಿನಿಂದ 220 ರನ್ ಬಾರಿಸಿದರು.

ಮಹಾರಾಷ್ಟ್ರ ಇನ್ನಿಂಗ್ಸ್​ನ 49ನೇ ಓವರ್​ನಲ್ಲಿ ಉಗ್ರರೂಪ ತಾಳಿದ ರುತುರಾಜ್ ಒಂದೇ ಓವರ್​ನಲ್ಲಿ ಬರೋಬ್ಬರಿ 7 ಸಿಕ್ಸರ್ ಸಿಡಿಸಿದರು.

ಈ ಪಂದ್ಯದಲ್ಲಿ ಬರೋಬ್ಬರಿ 10 ಬೌಂಡರಿ ಹಾಗೂ 16 ಸಿಕ್ಸರ್ ಸಿಡಿಸಿದ ರುತುರಾಜ್ ಕೇವಲ ಬೌಂಡರಿಗಳಿಂದಲೇ 136 ರನ್ ಕಲೆ ಹಾಕಿದರು.

ಕ್ರಿಕೆಟ್ ಇತಿಹಾಸದಲ್ಲಿ ಆಟಗಾರನೊಬ್ಬ ಒಂದೇ ಓವರ್‌ನಲ್ಲಿ 7 ಸಿಕ್ಸರ್ ಬಾರಿಸಿದ ದಾಖಲೆಯನ್ನು ರುತುರಾಜ್ ಬರೆದರು.