ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮಳೆಗಾಲದಲ್ಲಿ ಚಿಕ್ಕಮಗಳೂರು ಸಾಕಷ್ಟು ಪ್ರವಾಸಿಗರಿಗೆ ನೆಚ್ಚಿನ ತಾಣ.

ಮುಂಜಾನೆಯ ಮಂಜಿನ ಶೃಂಗಾರದಲ್ಲಿ ಬೆಟ್ಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೊಂದು ಹಬ್ಬ. 

ಆದರೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸಾಕಷ್ಟು ನಿರ್ಬಂಧ ಹೇರಿದೆ. 

ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.

ಪರಿಣಾಮ ಜು.28ರಿಂದ 31ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವಾಸಕ್ಕೆ ಅನುಮತಿ ಇಲ್ಲ.