ಐವರು ಸ್ಟಾರ್ ಆಟಗಾರರು ಔಟ್! ವಿಶ್ವಕಪ್ ಬಳಿಕ ಬದಲಾದ ಟೀಂ ಇಂಡಿಯಾ
18 January 2025
Pic credit: Google
ಪೃಥ್ವಿ ಶಂಕರ
2025ರ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. 2023ರ ಐಸಿಸಿ ಏಕದಿನ ಟೂರ್ನಿಯಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ ಏಕದಿನ ವಿಶ್ವಕಪ್ ಆಡಿತ್ತು. ಆ ತಂಡಕ್ಕೆ ಹೋಲಿಸಿದರೆ ಈ ಬಾರಿ ಹಲವು ಸ್ಟಾರ್ ಆಟಗಾರರು ತಂಡದಿಂದ ಕಾಣೆಯಾಗಿದ್ದಾರೆ.
Pic credit: Google
2023ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ 5 ಆಟಗಾರರು ಈ ಬಾರಿ ಐಸಿಸಿ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಿಲ್ಲ.
Pic credit: Google
ರವಿಚಂದ್ರನ್ ಅಶ್ವಿನ್ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾದ ಭಾಗವಾಗಿಲ್ಲ. ಅವರು ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಅವರು 2023 ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ್ದರು.
Pic credit: Google
ವೇಗಿ ಮೊಹಮ್ಮದ್ ಸಿರಾಜ್ ಕೂಡ ತಂಡಕ್ಕೆ ಆಯ್ಕೆಯಾಗಿಲ್ಲ. 2023ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಪ್ರಮುಖ ವೇಗಿಗಳಲ್ಲಿ ಸಿರಾಜ್ ಒಬ್ಬರಾಗಿದ್ದರು.
Pic credit: Google
ಶಾರ್ದೂಲ್ ಠಾಕೂರ್ ಅವರು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿಲ್ಲ. ಆದರೆ 2023ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಶಾರ್ದೂಲ್ಗೆ ಸಿಕ್ಕಿತ್ತು.
Pic credit: Google
ಇಶಾನ್ ಕಿಶನ್ 2023ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಭಾಗವಾಗಿದ್ದರು. ಆದರೆ ಕೆಲ ದಿನಗಳಿಂದ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಉಳಿದಿದ್ದ ಅವರು ಇದೀಗ ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆಯಾಗಿಲ್ಲ.
Pic credit: Google
15 ಸದಸ್ಯರ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಸ್ಥಾನ ಪಡೆದಿಲ್ಲ. ಸೂರ್ಯ 2023ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಪಡೆದಿದ್ದರು.