31 Dec 2024

11 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಡೇವಿಡ್ ವಾರ್ನರ್

OC: PC: Google

Rajesh Duggumane

Author: Zahir

ಬಿಗ್​ಬ್ಯಾಷ್ ಲೀಗ್​ 2024ರ 16ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

ಅದು ಕೂಡ ಬರೋಬ್ಬರಿ 11 ವರ್ಷಗಳ ಬಳಿಕ. ಅಂದರೆ ಡೇವಿಡ್ ವಾರ್ನರ್ ಕೊನೆಯ ಬಾರಿಗೆ ಬಿಬಿಎಲ್​ನಲ್ಲಿ ಅರ್ಧಶತಕ ಬಾರಿಸಿದ್ದು 2013 ರಲ್ಲಿ.

2024ರ ಬಿಗ್​ಬ್ಯಾಷ್ ಲೀಗ್​ನ 16ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ಮತ್ತು ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 57 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 10 ಫೋರ್​​ಗಳೊಂದಿಗೆ 86 ರನ್ ಬಾರಿಸಿದ್ದಾರೆ.

ಈ ಮೂಲಕ ಬಿಗ್ ಬ್ಯಾಷ್​ ಲೀಗ್​ನಲ್ಲಿ ತನ್ನ ಗರಿಷ್ಠ ಸ್ಕೋರ್​ಗಳಿಸಿದ್ದಾರೆ. ಇದಕ್ಕೂ ಮುನ್ನ 2013 ರಲ್ಲಿ ವಾರ್ನರ್ 50 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು.

ಡೇವಿಡ್ ವಾರ್ನರ್ ಅವರ ಈ ಅರ್ಧಶತಕದೊಂದಿಗೆ ಸಿಡ್ನಿ ಥಂಡರ್ ತಂಡವು 20 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 148 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸಿಡ್ನಿ ಥಂಡರ್ ತಂಡವು 8 ರನ್​ಗಳ ಜಯ ಸಾಧಿಸಿದೆ.