PC: IPL BY: Zahir
28 April 2025
ಐಪಿಎಲ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 3 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಯುಜ್ವೇಂದ್ರ ಚಹಲ್ ಹೆಸರಿನಲ್ಲಿದೆ. ಚಹಲ್ ಒಟ್ಟು 214 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ.
ಈ ಪಟ್ಟಿಯಲ್ಲಿ ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಭುವಿ ಈವರೆಗೆ ಒಟ್ಟು 193 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಪಿಯೂಷ್ ಚಾವ್ಲಾ. ಲೆಗ್ ಸ್ಪಿನ್ನರ್ ಚಾವ್ಲಾ ಈವರೆಗೆ 192 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ನರೈನ್ ಈವರೆಗೆ 187 ವಿಕೆಟ್ ಗಳನ್ನು ಪಡೆದಿದ್ದಾರೆ.
ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವುದು ಸಿಎಸ್ ಕೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಆರ್ ಅಶ್ವಿನ್ ಈವರೆಗೆ 185 ವಿಕೆಟ್ ಗಳನ್ನು ಕಬಳಿಸಿದ್ದಾರೆ.
ವೆಸ್ಟ್ ಇಂಡೀಸ್ ಆಟಗಾರ ಡ್ವೇನ್ ಬ್ರಾವೊ ಐಪಿಎಲ್ನಲ್ಲಿ 183 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ.
ಐಪಿಎಲ್ನಲ್ಲಿ 174 ವಿಕೆಟ್ಗಳನ್ನು ಕಬಳಿಸಿರುವ ಅಮಿತ್ ಮಿಶ್ರಾ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ಗಳ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸಿದ್ದಾರೆ.