ಅಧಿಕ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಯಾವುದು ಗೊತ್ತಾ?

4 september 2024

Pic credit: Google

ಪೃಥ್ವಿ ಶಂಕರ

Pic credit: Google

ಹೆಚ್ಚು ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಜಂಟಿಯಾಗಿ ಮೊದಲ ಸ್ಥಾನದಲ್ಲಿವೆ.

Pic credit: Google

ಆಸ್ಟ್ರೇಲಿಯಾ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದ್ದು, 2006 ಮತ್ತು 2009ರಲ್ಲಿ ರಿಕಿ ಪಾಂಟಿಂಗ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಈ ಪ್ರಶಸ್ತಿ ಗೆದ್ದಿತ್ತು.

Pic credit: Google

ಭಾರತ ಕೂಡ 2 ಬಾರಿ ಈ ಪ್ರಶಸ್ತಿ ಗೆದ್ದಿದ್ದು 2002 ಮತ್ತು 2013ರಲ್ಲಿ ಈ ಸಾಧನೆ ಮಾಡಿದೆ. 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಪ್ರಶಸ್ತಿ ಗೆದ್ದಿತ್ತು.

Pic credit: Google

ದಕ್ಷಿಣ ಆಫ್ರಿಕಾ ಒಮ್ಮೆ ಮಾತ್ರ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದು, 1998 ರಲ್ಲಿ ಈ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Pic credit: Google

2000ನೇ ಇಸವಿಯಲ್ಲಿ ನ್ಯೂಜಿಲೆಂಡ್ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವ ಮೂಲಕ ಒಮ್ಮೆ ಮಾತ್ರ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.

Pic credit: Google

ಶ್ರೀಲಂಕಾ ಕೂಡ ಈ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, 2002 ರ ಚಾಂಪಿಯನ್ಸ್ ಟ್ರೋಫಿಯನ್ನು ಶ್ರೀಲಂಕಾ ಗೆದ್ದುಕೊಂಡಿತ್ತು.

Pic credit: Google

ವಾಸ್ತವವಾಗಿ 2002 ರಲ್ಲಿ, ಮಳೆಯಿಂದಾಗಿ ಫೈನಲ್ ಪಂದ್ಯವನ್ನು ನಡೆಸಲಾಗಲಿಲ್ಲ. ಆದ್ದರಿಂದ ಶ್ರೀಲಂಕಾ ಮತ್ತು ಭಾರತವನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು.

Pic credit: Google

ಬ್ರಿಯಾನ್ ಲಾರಾ ಅವರ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಕೂಡ 2004 ರಲ್ಲಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Pic credit: Google

ಪಾಕಿಸ್ತಾನ ಕೂಡ ಈ ಸಾಧನೆ ಮಾಡಿದ್ದು, ಭಾರತವನ್ನು ಸೋಲಿಸುವ ಮೂಲಕ ಪಾಕಿಸ್ತಾನ 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.