ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ತಂಡ ಈ ಪಂದ್ಯವನ್ನು 69 ರನ್‌ಗಳಿಂದ ಗೆದ್ದುಕೊಂಡಿದೆ.

16 October 2023

ಈ 69 ರನ್‌ಗಳ ಸೋಲಿನೊಂದಿಗೆ, ಏಕದಿನ ವಿಶ್ವಕಪ್‌ನಲ್ಲಿ ಎಲ್ಲಾ 11 ಟೆಸ್ಟ್ ಆಡುವ ರಾಷ್ಟ್ರಗಳ ವಿರುದ್ಧ  ಸೋತ ಮೊದಲ ತಂಡ ಎಂಬ ಕುಖ್ಯಾತಿಗೆ ಇಂಗ್ಲೆಂಡ್ ಗುರಿಯಾಗಿದೆ.

1975 ರ ವಿಶ್ವಕಪ್ ಸೆಮಿಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಿದ್ದ ಇಂಗ್ಲೆಂಡ್ 4 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

1979ರ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಆಂಗ್ಲರನ್ನು 92 ರನ್​ಗಳಿಂದ ಮಣಿಸಿತ್ತು.

1983 ರ ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ 2 ವಿಕೆಟ್​ಗಳಿಂದ ಸೋತಿತ್ತು.

1983 ರ ವಿಶ್ವಕಪ್​ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ 6 ವಿಕೆಟ್​ಗಳಿಂದ ಸೋತಿತ್ತು.

1987 ರ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 18 ರನ್​ಗಳಿಂದ ಸೋತಿತ್ತು.

1987 ರ ವಿಶ್ವಕಪ್ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 9 ರನ್​ಗಳಿಂದ ಸೋತಿತ್ತು.

1996 ರ ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 78  ರನ್​ಗಳಿಂದ ಸೋತಿತ್ತು.

1996 ರ ವಿಶ್ವಕಪ್ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್​ಗಳಿಂದ ಸೋತಿತ್ತು.

2011 ರ ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 3 ವಿಕೆಟ್​ಗಳಿಂದ ಸೋತಿತ್ತು.

2011 ರ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 2 ವಿಕೆಟ್​ಗಳಿಂದ ಸೋತಿತ್ತು.

ಇದೀಗ 2023 ರ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ 69 ರನ್​ಗಳಿಂದ ಸೋತಿದೆ.