ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ.

04 October 2023

2022 ರಲ್ಲಿ ಡಬ್ಲಿನ್​ನಲ್ಲಿ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ದೀಪಕ್ ಹೂಡಾ 55 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

2023 ರಲ್ಲಿ ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ 54 ಎಸೆತಗಳಲ್ಲಿ ಟಿ20 ಶತಕ ಸಿಡಿಸಿದ್ದರು.

2022 ರಲ್ಲಿ ದುಬೈನಲ್ಲಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ಧ 53 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ್ದರು.

2018 ರಲ್ಲಿ ಮ್ಯಾಂಚೆಸ್ಟರ್​ನಲ್ಲಿ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ 53 ಎಸೆತಗಳಲ್ಲಿ ಶಕತ ಬಾರಿಸಿದ್ದರು.

2022 ರಲ್ಲಿ ಮೌಂಟ್ ಮೌಂಗನುಯಿನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್  ವಿರುದ್ಧ 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

2023 ರಲ್ಲಿ ಚೀನಾದ ಹ್ಯಾಂಗ್‌ಝೌನಲ್ಲಿ ಯಶಸ್ವಿ ಜೈಸ್ವಾಲ್ ನೇಪಾಳ ವಿರುದ್ಧ 48 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ್ದಾರೆ.

ನಾಟಿಂಗ್ಹ್ಯಾಮ್​ನಲ್ಲಿ 2022 ರಲ್ಲಿ ನಡೆದ ಪಂದ್ಯದಲ್ಲಿ  ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧ48 ಎಸೆತಗಳಲ್ಲಿ ಶತಕ ಪೂರೈಸಿದ್ದರು.

2016 ರಲ್ಲಿ ಲಾಡರ್ಹಿಲ್​ನಲ್ಲಿ ನಡದ ಪಂದ್ಯದಲ್ಲಿ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ 46 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಶ್ರೀಲಂಕಾ ವಿರುದ್ಧ 2023 ರಲ್ಲಿ ರಾಜ್ಕೋಟ್​ನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 45 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ  2017 ರಲ್ಲಿ ಶ್ರೀಲಂಕಾ ವಿರುದ್ಧ 35 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.