ಫ್ರೆಂಚ್ ಓಪನ್ ವರ್ಲ್ಡ್ ಟೂರ್ ಸೂಪರ್-750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ತಾರೆ ಪಿವಿ ಸಿಂಧು ಶುಭಾರಂಭ ಮಾಡಿ ಪ್ರೀ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

25 October 2023

ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಇಂಡೋನೇಷ್ಯಾದ ಗ್ರೆಗೋರಿಯಾ ಮರಿಸ್ಕಾ ತುಂಜಂಗ್ ಅವರನ್ನು ಮಣಿಸಿದರು.

69 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಸಿಂಧು 12-21, 21-18, 21-15ರಲ್ಲಿ ಗ್ರೆಗೋರಿಯಾ ಮರಿಸ್ಕಾ ತುಂಜಂಗ್ ಅವರನ್ನು ಮಣಿಸಿದರು.

ಮುಂದಿನ ಸುತ್ತಿನಲ್ಲಿ ಸಿಂಧು, ಥೈಲ್ಯಾಂಡ್‌ನ ಸುಪಾನಿಡಾ ಕಟೆಥಾಂಗ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಡಬಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ ಜಯದ ನಗೆ ಬೀರಿದೆ.

ಫ್ರಾನ್ಸ್​ನ ಲೂಕಾಸ್ ಕಾರ್ವೆ-ರೊನಾನ್ ಲೇಬರ್ ಅವರನ್ನು 21-13, 21-13 ರಿಂದ ಸೋಲಿಸಿ ಈ ಜೋಡಿ ಪ್ರೀ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದೆ.

ಈ ಜೋಡಿ ಮುಂದಿನ ಸುತ್ತಿನಲ್ಲಿ ಮೂರು ಬಾರಿಯ ವಿಶ್ವ ಚಾಂಪಿಯನ್ ಮೊಹಮ್ಮದ್ ಅಹ್ಸಾನ್ ಮತ್ತು ಇಂಡೋನೇಷ್ಯಾದ ಹೆಂಡ್ರಾ ಸೆಟಿಯಾವಾನ್ ವಿರುದ್ಧ ಕಣಕ್ಕಿಳಿಯಲ್ಲಿದೆ.