ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ
23 January 2025
Pic credit: Google
ಪೃಥ್ವಿ ಶಂಕರ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಬುಧವಾರ ಅಂದರೆ ಜನವರಿ 22 ರಂದು ನಡೆದಿತ್ತು.
Pic credit: Google
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಏಳು ವಿಕೆಟ್ಗಳ ಜಯದೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Pic credit: Google
ಈ ಗೆಲುವಿನೊಂದಿಗೆ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದೊಡ್ಡ ಸಾಧನೆ ಮಾಡಿದ್ದಾರೆ.
Pic credit: Google
ಅದೆನೆಂದರೆ, ಹಾರ್ದಿಕ್ ಪಾಂಡ್ಯ ಆಟಗಾರನಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡದಲ್ಲಿದ್ದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
Pic credit: Google
ಇದುವರೆಗೆ ಆಡಿರುವ 110 ಟಿ20 ಪಂದ್ಯಗಳ ಪೈಕಿ ಪಾಂಡ್ಯ 78 ಪಂದ್ಯಗಳನ್ನು ಗೆದ್ದ ತಂಡದ ಭಾಗವಾಗಿದ್ದಾರೆ.
Pic credit: Google
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅವರು 132 ಪಂದ್ಯಗಳಲ್ಲಿ 80 ಪಂದ್ಯಗಳನ್ನು ಗೆದ್ದ ತಂಡದಲ್ಲಿ ಆಡಿದ್ದಾರೆ.
Pic credit: Google
ಈ ಪಂದ್ಯದ ಬಗ್ಗೆ ಹೇಳುವುದಾದರೆ... ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 132 ರನ್ ಗಳಿಸಿತು.
Pic credit: Google
ಈ ಗುರಿ ಬೆನ್ನಟ್ಟಿದ ಭಾರತದ ಪರ ಆರಂಭಿಕ ಅಭಿಷೇಕ್ 34 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳ ಸಹಾಯದಿಂದ 79 ರನ್ ಗಳಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು.