ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ ವಡೋದರದಲ್ಲಿ ನಡೆಯುತ್ತಿದೆ.
Pic credit: Google
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವನಿತಾ ಪಡೆ 314 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ.
Pic credit: Google
ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ 23 ಎಸೆತಗಳನ್ನು ಎದುರಿಸಿ 34 ರನ್ ಗಳಿಸಿದರು.
Pic credit: Google
ಈ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ನಿರ್ಮಿಸಿದ್ದು ಏಕದಿನದಲ್ಲಿ ನಾಯಕಿಯಾಗಿ 1000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ 10 ನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.
Pic credit: Google
ಪುರುಷರ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಮೊಹಮ್ಮದ್ ಅಜರುದ್ದೀನ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಮತ್ತು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು.
Pic credit: Google
ಮಹಿಳಾ ಕ್ರಿಕೆಟ್‌ನಲ್ಲಿ ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಹರ್ಮನ್‌ಪ್ರೀತ್ ಕೌರ್ ಭಾಜನರಾಗಿದ್ದಾರೆ.