ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಐವರು ಭಾರತೀಯ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ. ಆ ಆಟಗಾರರ ಪಟ್ಟಿ ಹೀಗಿದೆ...
1- ಶುಭ್ಮನ್ ಗಿಲ್
ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 826 ಅಂಕಗಳೊಂದಿಗೆ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ.
2- ಸೂರ್ಯಕುಮಾರ್ ಯಾದವ್
ಟಿ20 ಬ್ಯಾಟರ್ಗಳ ಶ್ರೇಯಾಂಕದಲ್ಲಿ 855 ಪಾಯಿಂಟ್ಸ್ ಕಲೆಹಾಕಿರುವ ಟೀಮ್ ಇಂಡಿಯಾದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದಾರೆ.
3- ರವಿ ಬಿಷ್ಣೋಯ್
ಟಿ20 ಬೌಲರ್ಗಳ ಪಟ್ಟಿಯಲ್ಲಿ 699 ಅಂಕಗಳನ್ನು ಸಂಪಾದಿಸಿ ಇದೇ ಮೊದಲ ಬಾರಿ ರವಿ ಬಿಷ್ಣೋಯ್ ಅಗ್ರಸ್ಥಾನಕ್ಕೇರಿದ್ದಾರೆ.
4- ರವಿಚಂದ್ರನ್ ಅಶ್ವಿನ್
ಈ ಬಾರಿಯ ಐಪಿಎಲ್ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೀಡಿದ್ದಾರೆ. ಇದರಲ್ಲಿ 830 ಭಾರತೀಯ ಹಾಗೂ 336 ವಿದೇಶಿ ಆಟಗಾರರಿದ್ದಾರೆ.
5- ರವೀಂದ್ರ ಜಡೇಜಾ
ಟೆಸ್ಟ್ ಆಲ್ರೌಂಡರ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ 455 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಟಿ20ಯಲ್ಲೂ ಅಗ್ರಸ್ಥಾನ
ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಲ್ಲೂ ಟೀಮ್ ಇಂಡಿಯಾ ಅಗ್ರಸ್ಥಾನ ಅಲಂಕರಿಸಿದೆ. ಭಾರತ ತಂಡ ಒಟ್ಟು 265 ಪಾಯಿಂಟ್ಸ್ ಕಲೆಹಾಕಿದೆ.
ಏಕದಿನದಲ್ಲೂ ಮಿಂಚಿಂಗ್
ಭಾರತ ತಂಡವು ಏಕದಿನ ತಂಡಗಳ ಶ್ರೇಯಾಂಕದಲ್ಲೂ ಮೊದಲ ಸ್ಥಾನದಲ್ಲಿರುವುದು ವಿಶೇಷ. ಒಟ್ಟು 121 ಪಾಯಿಂಟ್ಸ್ಗಳೊಂದಿಗೆ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ.
ಟೆಸ್ಟ್ನಲ್ಲೂ ನಂಬರ್ 1
ಭಾರತ ತಂಡವು ಟೆಸ್ಟ್ ಕ್ರಿಕೆಟ್ನಲ್ಲೂ ಅಗ್ರಸ್ಥಾನದಲ್ಲಿದೆ. ಒಟ್ಟು 118 ಅಂಕಗಳೊಂದಿಗೆ ಟೀಮ್ ಇಂಡಿಯಾ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.