ಬ್ಯಾಟಿಂಗ್​ನಲ್ಲಿ ದಾಖಲೆಯ ಶತಕ ಸಿಡಿಸಿದ ಅಶ್ವಿನ್ ಬೌಲಿಂಗ್‌ನಲ್ಲಿ ವಿಫಲ

20 september 2024

Pic credit: Google

ಪೃಥ್ವಿ ಶಂಕರ

Pic credit: Google

ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಎರಡು ದಿನಗಳ ಆಟ ಮುಗಿದಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಮುನ್ನಡೆ 308 ರನ್‌ಗಳಿಗೆ ಏರಿಕೆಯಾಗಿದೆ.

Pic credit: Google

ತಂಡದ ಈ ಮುನ್ನಡೆಗೆ ಆರ್. ಅಶ್ವಿನ್ ಪ್ರಮುಖ ಕೊಡುಗೆ ನೀಡಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ದಾಖಲೆಯ ಶತಕ ಸಿಡಿಸಿದ್ದರು.

Pic credit: Google

ಆರ್ ಅಶ್ವಿನ್ ತಮ್ಮ ತವರು ನೆಲದಲ್ಲಿ ನಡೆದ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 133 ಎಸೆತಗಳಲ್ಲಿ 113 ರನ್ ಗಳಿಸಿದ್ದರು. ಈ ಅವಧಿಯಲ್ಲಿ, ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸಿಡಿದವು. ಇದರಿಂದಾಗಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 376 ರನ್ ಗಳಿಸಿತ್ತು.

Pic credit: Google

ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶದ ಮೊದಲ ಇನಿಂಗ್ಸ್ 149 ರನ್‌ಗಳಿಗೆ ಆಲೌಟ್ ಆಯಿತು. ಆದರೆ ಅಚ್ಚರಿಯ ಸಂಗತಿ ಎಂದರೆ ಬ್ಯಾಟಿಂಗ್​ನಲ್ಲಿ ಮಿಂಚಿದ ಅಶ್ವಿನ್​ಗೆ ಬೌಲಿಂಗ್‌ನಲ್ಲಿ ಯಾವುದೇ ವಿಕೆಟ್ ಸಿಗಲಿಲ್ಲ.

Pic credit: Google

ತನ್ನ ತವರು ನೆಲವಾದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇದು ಎರಡನೇ ಬಾರಿಗೆ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಯಾವುದೇ ವಿಕೆಟ್ ಪಡೆಯಲಿಲ್ಲ.

Pic credit: Google

ಇದಕ್ಕೂ ಮುನ್ನ 2016ರಲ್ಲಿ ಇಂಗ್ಲೆಂಡ್ ವಿರುದ್ಧದ ಚೆನ್ನೈ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಯಾವುದೇ ವಿಕೆಟ್ ಪಡೆದಿರಲಿಲ್ಲ. ಅಂದರೆ ಈಗ 8 ವರ್ಷಗಳ ನಂತರ ಮತ್ತೊಮ್ಮೆ ಅಶ್ವಿನ್ ಖಾಲಿ ಕೈಯಲ್ಲಿ ಇನ್ನಿಂಗ್ಸ್ ಮುಗಿಸಿದ್ದಾರೆ.

Pic credit: Google

ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರ್ ಅಶ್ವಿನ್ ಅವರಿಗೆ ಇದು ಆರನೇ ಟೆಸ್ಟ್ ಪಂದ್ಯವಾಗಿದೆ. ಈ ಅವಧಿಯಲ್ಲಿ ಅವರು ಇಲ್ಲಿಯವರೆಗೆ 30 ವಿಕೆಟ್ ಪಡೆದಿದ್ದಾರೆ.