2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಯಶಸ್ಸಿನ ಪಯಣ ಮುಂದುವರೆದಿದೆ. ಭಾರತ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.

19 October 2023

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಭಾರತದ ದಾಳಿಗೆ ನಲುಗಿ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ಕಲೆಹಾಕಿತು.

ಬಾಂಗ್ಲಾದೇಶ ಪರ ಆರಂಭಿಕರಾದ ತಂಜಿದ್ ಅಸನ್ (51) ಮತ್ತು ಲಿಟನ್ ದಾಸ್ (66) ಅರ್ಧಶತಕ ಗಳಿಸಿದರು.

ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಈ ಗುರಿ ಬೆನ್ನಟ್ಟಿದ ಭಾರತ  42ನೇ ಓವರ್​ನಲ್ಲಿಯೇ 3 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಭಾರತದ ಪರ ನಾಯಕ ರೋಹಿತ್ ಶರ್ಮಾ 7 ಬೌಂಡರಿ 2 ಸಿಕ್ಸರ್ ಸಹಿತ 48 ರನ್ ಸಿಡಿಸಿದರು.

ಶುಭ್​ಮನ್ ಗಿಲ್ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 53 ರನ್ ಕಲೆಹಾಕಿದರು.

ಅಜೇಯ ಶತಕ ಸಿಡಿಸಿದ ವಿರಾಟ್ ಕೊಹ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 103 ರನ್​ಗಳ ಇನ್ನಿಂಗ್ಸ್ ಆಡಿದರು.