ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ ‘ಕ್ರಿಕೆಟ್ ಕಾಶಿ' ಲಾರ್ಡ್ಸ್‌ ಮೈದಾನ

22  August 2024

Pic credit: Google

ಪೃಥ್ವಿ ಶಂಕರ

Pic credit: Google

ಭಾರತದ ಎರಡೂ ಕ್ರಿಕೆಟ್ ತಂಡಗಳು ಮುಂದಿನ ವರ್ಷ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಉಭಯ ತಂಡಗಳ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

Pic credit: Google

ಈ ಪ್ರವಾಸದಲ್ಲಿ ಭಾರತ ಮಹಿಳಾ ತಂಡ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಆಡಲಿದೆ.

Pic credit: Google

ಭಾರತ-ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯು ಜೂನ್ 28 ರಿಂದ ಜುಲೈ 12 ರವರೆಗೆ ನಡೆಯಲಿದ್ದು, ಏಕದಿನ ಸರಣಿಯ ಪಂದ್ಯಗಳು ಜುಲೈ 16, 19 ಮತ್ತು 22 ರಂದು ನಡೆಯಲಿದೆ.

Pic credit: Google

2026ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಮಹಿಳಾ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಲಾರ್ಡ್ಸ್ ಮೈದಾನ ಆತಿಥ್ಯ ವಹಿಸಲಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಿಸಿದೆ.

Pic credit: Google

ಈ ಎರಡು ಮಹಿಳಾ ತಂಡಗಳ ನಡುವಿನ ಟೆಸ್ಟ್ ಪಂದ್ಯಕ್ಕೆ ಲಾರ್ಡ್ಸ್ ಮೈದಾನ ಆತಿಥ್ಯ ವಹಿಸುತ್ತಿರುವುದು ಇದೇ ಮೊದಲು.

Pic credit: Google

ಇಂಗ್ಲೆಂಡ್ ಮಹಿಳಾ ತಂಡಗಳು ಕಳೆದ ಮೂರು ವರ್ಷಗಳಿಂದ ಲಾರ್ಡ್ಸ್‌ನಲ್ಲಿ ವೈಟ್-ಬಾಲ್ ಪಂದ್ಯಗಳನ್ನು ಆಡುತ್ತಿವೆ. ಆದರೆ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಆತಿಥ್ಯ ವಹಿಸುವುದು ಇದೇ ಮೊದಲು.

Pic credit: Google

ಭಾರತ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್‌ನಲ್ಲಿ 2021 ರಲ್ಲಿ ಬ್ರಿಸ್ಟಲ್‌ನಲ್ಲಿ ಆಡಿತ್ತು. ಈ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಇದಲ್ಲದೇ ಕಳೆದ ವರ್ಷ ಭಾರತದಲ್ಲಿ ಉಭಯ ತಂಡಗಳ ನಡುವೆ ಟೆಸ್ಟ್ ಪಂದ್ಯ ನಡೆದಿತ್ತು.