ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯವನ್ನಾಡಿದ ಕೊಹ್ಲಿಗೆ ಶುಭಾರಂಭ ಸಿಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಕೊಹ್ಲಿ ಖಾತೆ ತೆರೆಯದೆ ಔಟಾಗಿದ್ದಾರೆ.

29 October 2023

ಈ ಪಂದ್ಯದಲ್ಲಿ  9 ಎಸೆತಗಳನ್ನು ಆಡಿದ ಕೊಹ್ಲಿ, ಡೇವಿಡ್ ವಿಲ್ಲಿ ಬೌಲಿಂಗ್​ನಲ್ಲಿ ಬೆನ್ ಸ್ಟೋಕ್ಸ್​ಗೆ ಕ್ಯಾಚ್ ನೀಡಿದರು.

ಈ ವರ್ಷದಲ್ಲಿ ತಾವು ಆಡಿದ ಎಲ್ಲಾ ಏಕದಿನ ಪಂದ್ಯಗಳಲ್ಲಿ ರನ್ ಗಳಿಸಿದ್ದ ಕೊಹ್ಲಿ, ಈ ವರ್ಷ ಮೊದಲ ಬಾರಿಗೆ ಏಕದಿನದಲ್ಲಿ ಖಾತೆ ತೆರೆಯದೆ ಔಟಾಗಿದ್ದಾರೆ.

ವಿರಾಟ್ 11 ಫೆಬ್ರವರಿ 2022 ರಂದು ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಖಾತೆ ತೆರೆಯದೆ ಏಕದಿನದಲ್ಲಿ ಕೊನೆಯ ಬಾರಿಗೆ ಔಟಾಗಿದ್ದರು.

ಇದೀಗ 26 ಇನ್ನಿಂಗ್ಸ್‌ಗಳ ನಂತರ ಕೊಹ್ಲಿ ಏಕದಿನದಲ್ಲಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದಾರೆ. ಅದರಲ್ಲೂ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ ಇದೇ ಮೊದಲ ಬಾರಿಗೆ ಶೂನ್ಯಕ್ಕೆ ಔಟಾಗಿದ್ದಾರೆ.

ಈ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಐದು ರನ್‌ಗಳಿಂದ ಶತಕ ವಂಚಿತರಾಗಿದ್ದರು. ಇಂಗ್ಲೆಂಡ್ ವಿರುದ್ಧ ಕೊಹ್ಲಿ ಶತಕ ಸಿಡಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.

ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತದ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಸಚಿನ್​ರನ್ನು ಸರಿಗಟ್ಟಿದ್ದಾರೆ.

ಕೊಹ್ಲಿ ಮತ್ತು ಸಚಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಲಾ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.