ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ- ಕಿವೀಸ್ ಪುಣೆ ಟೆಸ್ಟ್

25  october 2024

Pic credit: Google

ಪೃಥ್ವಿ ಶಂಕರ

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಪುಣೆ ಟೆಸ್ಟ್‌ ಹಲವು ಮೊದಲುಗಳಿಗೆ ಸಾಕ್ಷಿಯಾಗಿದೆ. 142 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಅಪರೂಪದ ಘಟನೆಯೊಂದು ಪುಣೆ ಟೆಸ್ಟ್​ನಲ್ಲಿ ನಡೆದಿದೆ.

Pic credit: Google

ಟೆಸ್ಟ್ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಪಿನ್ನರ್‌ಗಳು 7 ವಿಕೆಟ್ ಪಡೆದಿದ್ದು, ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

Pic credit: Google

ಭಾರತದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 59 ರನ್‌ ನೀಡಿ ಕಿವೀಸ್ ಪಡೆಯ 7 ವಿಕೆಟ್ ಉರುಳಿಸಿದರು.

Pic credit: Google

ಇತ್ತ ನ್ಯೂಜಿಲೆಂಡ್ ಪರ ಮಿಚೆಲ್ ಸ್ಯಾಂಟ್ನರ್ ಮೊದಲ ಇನ್ನಿಂಗ್ಸ್​ನಲ್ಲಿ 53 ರನ್ ನೀಡಿ 7 ವಿಕೆಟ್ ಪಡೆದರು.

Pic credit: Google

21ನೇ ಶತಮಾನದಲ್ಲಿ ಎರಡೂ ತಂಡಗಳ ಬೌಲರ್‌ಗಳು ಒಂದೇ ಟೆಸ್ಟ್‌ನಲ್ಲಿ ತಲಾ 7 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು.

Pic credit: Google

ಪುಣೆ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು.

Pic credit: Google

ಇತ್ತ ಮಿಚೆಲ್ ಸ್ಯಾಂಟ್ನರ್ ಕೂಡ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 7 ವಿಕೆಟ್ ಪಡೆಯುವ ಮೂಲಕ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು.

Pic credit: Google