ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಗಿಲ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ.
22 October 2023
ನ್ಯೂಜಿಲೆಂಡ್ ವಿರುದ್ಧ 28 ರನ್ ಬಾರಿಸಿದ ಗಿಲ್ ಏಕದಿನದಲ್ಲಿ 2000 ರನ್ ಪೂರೈಸಿದ್ದಾರೆ.
ಟೀಂ ಇಂಡಿಯಾದ ಈ ಸ್ಟಾರ್ ಓಪನರ್ ತಮ್ಮ ವೃತ್ತಿಜೀವನದ 38 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದರು.
ಇದರೊಂದಿಗೆ ಗಿಲ್ ಏಕದಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ರನ್ ಪೂರೈಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಹಾಗೆಯೇ 40 ಇನ್ನಿಂಗ್ಸ್‌ಗಳಲ್ಲಿ 2000 ರನ್ ಪೂರೈಸಿದ್ದ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಅವರ ದಾಖಲೆಯನ್ನು ಮುರಿದಿದ್ದಾರೆ.
ಅದೇ ಸಮಯದಲ್ಲಿ 45 ಇನ್ನಿಂಗ್ಸ್‌ಗಳಲ್ಲಿ 2000 ರನ್ ಪೂರೈಸಿದ್ದ ಪಾಕಿಸ್ತಾನದ ಬಾಬರ್ ಆಝಂ ಮತ್ತು ಇಂಗ್ಲೆಂಡ್‌ನ ಕೆವಿನ್ ಪೀಟರ್ಸನ್ರನ್ನು ಹಿಂದಿಕ್ಕಿದ್ದಾರೆ.
ತಮ್ಮ ವೃತ್ತಿಜೀವನದ ಮೊದಲ ವಿಶ್ವಕಪ್ ಆಡುತ್ತಿರುವ ಗಿಲ್, ಟೂರ್ನಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಿದ್ದರು
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಿಲ್ ಅರ್ಧಶತಕ ಸಿಡಿಸಿದ್ದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು.
ಶುಭ್ಮನ್ ಗಿಲ್ ಇದುವರೆಗೆ ಟೀಂ ಇಂಡಿಯಾ ಪರ 38 ಏಕದಿನ ಪಂದ್ಯಗಳಲ್ಲಿ 64 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 2000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.
ಇದನ್ನೂ ಓದಿ