ಭಾರತ- ಕಿವೀಸ್ ಹೆಡ್-ಟು-ಹೆಡ್ ದಾಖಲೆ ಹೇಗಿದೆ?

25 February 2025

Pic credit: Google

ಪೃಥ್ವಿ ಶಂಕರ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾರ್ಚ್ 2 ರಂದು ಚಾಂಪಿಯನ್ಸ್ ಟ್ರೋಫಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಗುಂಪು ಹಂತದಲ್ಲಿ ಎರಡೂ ತಂಡಗಳು ಆಡಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿವೆ.

Pic credit: Google

ಇದೀಗ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದು ಕುತೂಹಲಕಾರಿಯಾಗಿದೆ.

Pic credit: Google

ಆದಕ್ಕೆ ಮುಂಚೆ ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.

Pic credit: Google

ಏಕದಿನ ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವೆ 10 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 5 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

Pic credit: Google

ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಭಾರತದ ಮೇಲೆ ಪ್ರಾಬಲ್ಯ ಸಾಧಿಸಿದ್ದು, ಎರಡೂ ತಂಡಗಳ ನಡುವೆ ನಡೆದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದೆ.

Pic credit: Google

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಐದು ಬಾರಿ ಮುಖಾಮುಖಿಯಾಗಿವೆ.

Pic credit: Google

ಈ ಅವಧಿಯಲ್ಲಿ ಭಾರತ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ ಮೂರು ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.

Pic credit: Google

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. 2000ನೇ ಇಸವಿಯಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು ಸೋಲಿಸಿತು.

Pic credit: Google