ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಕನ್ನಡಿಗ

PC: IPL BY: Zahir

03 May 2025

ಕರ್ನಾಟಕದ ವೇಗಿ

ಐಪಿಎಲ್ 2025ರ ಪರ್ಪಲ್ ಕ್ಯಾಪ್​ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಮುಂಚೂಣಿಯಲ್ಲಿದ್ದಾರೆ.

ಪ್ರಸಿದ್ಧ್ ಕೃಷ್ಣ

ಗುಜರಾತ್ ಟೈಟಾನ್ಸ್ ಪರ 10 ಪಂದ್ಯಗಳನ್ನಾಡಿರುವ ಪ್ರಸಿದ್ಧ್ ಕೃಷ್ಣ ಒಟ್ಟು 19 ವಿಕೆಟ್​ ಕಬಳಿಸಿ ಅಗ್ರಸ್ಥಾನದಲ್ಲಿದ್ದಾರೆ.

ಜೋಶ್ ಹ್ಯಾಝಲ್​ವುಡ್

ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಒಟ್ಟು 18 ವಿಕೆಟ್ ಪಡೆದಿದ್ದು, ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಟ್ರೆಂಟ್ ಬೌಲ್ಟ್

ಮುಂಬೈ ಇಂಡಿಯನ್ಸ್ ವೇಗಿ ಟ್ರೆಂಟ್ ಬೌಲ್ಟ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಒಟ್ಟು 16 ವಿಕೆಟ್ ಪಡೆದಿದ್ದಾರೆ.

ನೂರ್ ಅಹ್ಮದ್

ಸಿಎಸ್​ಕೆ ತಂಡದ ಯುವ ಸ್ಪಿನ್ನರ್ ನೂರ್ ಅಹ್ಮದ್ ಒಟ್ಟು 15 ವಿಕೆಟ್ ಕಬಳಿಸಿದ್ದು, ಈ ಪಂದ್ಯದಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಖಲೀಲ್ ಅಹ್ಮದ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ವೇಗಿ ಖಲೀಲ್ ಅಹ್ಮದ್ 14 ವಿಕೆಟ್​ಗಳೊಂದಿಗೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

ಮೊಹಮ್ಮದ್ ಸಿರಾಜ್

ಜಿಟಿ ಪರ ಕಣಕ್ಕಿಳಿಯುತ್ತಿರುವ ಮೊಹಮ್ಮದ್ ಸಿರಾಜ್ ಒಟ್ಟು 14 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ.

ಮಿಚೆಲ್ ಸ್ಟಾರ್ಕ್​

ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮಿಚೆಲ್ ಸ್ಟಾರ್ಕ್​ ಈವರೆಗೆ 14 ವಿಕೆಟ್ ಪಡೆದಿದ್ದು, ಈ ಮೂಲಕ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.