PC: IPL BY: Zahir
29 April 2025
ಐಪಿಎಲ್ ನ 47ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
ಈ ಸ್ಪೋಟಕ ಶತಕದೊಂದಿಗೆ ವೈಭವ್ ಸೂರ್ಯವಂಶಿ ಟಿ20 ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ 14 ವರ್ಷದ ವೈಭವ್ ಪಾಲಾಗಿದೆ.
ಐಪಿಎಲ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಕೂಡ ವೈಭವ್ ಹೆಸರಿಗೆ ಸೇರ್ಪಡೆಯಾಗಿದೆ.
ಐಪಿಎಲ್ನಲ್ಲಿ ಕ್ರಿಸ್ ಗೇಲ್ (30 ಎಸೆತಗಳು) ಬಳಿಕ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವೈಭವ್ ಪಾತ್ರರಾಗಿದ್ದಾರೆ.
ಐಪಿಎಲ್ ನಲ್ಲಿ ಅತೀ ಕಡಿಮೆ ಇನಿಂಗ್ಸ್ ಗಳ ಮೂಲಕ ಚೊಚ್ಚಲ ಶತಕ ಸಿಡಿಸಿದ ದಾಖಲೆ ಕೂಡ ವೈಭವ್ ಪಾಲಾಗಿದೆ. ವೈಭವ್ ಕೇವಲ 3 ಇನಿಂಗ್ಸ್ ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.
ಐಪಿಎಲ್ನಲ್ಲಿ ಬೌಂಡರಿಗಳ ಮೂಲಕ ಅತೀ ಹೆಚ್ಚು ರನ್ಗಳಿಸಿ ಶತಕ ಬಾರಿಸಿದ ದಾಖಲೆ ಕೂಡ ವೈಭವ್ ಹೆಸರಿಗೆ ಸೇರ್ಪಡೆಯಾಗಿದೆ. ಯುವ ದಾಂಡಿಗ 11 ಸಿಕ್ಸ್, 7 ಫೋರ್ಗಳೊಂದಿಗೆ 94 ರನ್ ಬಾರಿಸಿ ಈ ದಾಖಲೆ ಬರೆದಿದ್ದಾರೆ.
11 ಸಿಕ್ಸರ್ ಬಾರಿಸಿ ಐಪಿಎಲ್ ಇನಿಂಗ್ಸ್ ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಕಿರಿಯ ಆಟಗಾರ ಎಂಬ ದಾಖಲೆಯನ್ನು ವೈಭವ್ ತಮ್ಮದಾಗಿಸಿಕೊಂಡಿದ್ದಾರೆ.