ಐಪಿಎಲ್ 2025 ರ 52 ನೇ ಪಂದ್ಯವು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು.
ಆರ್‌ಸಿಬಿ vs ಸಿಎಸ್ಕೆ
Pic credit: Google
ಈ ಪಂದ್ಯದಲ್ಲಿ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ದೊಡ್ಡ ದಾಖಲೆಯನ್ನು ಬರೆದರು.
ಕೊಹ್ಲಿ ಅರ್ಧಶತಕ
Pic credit: Google
ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ 5 ಸಿಕ್ಸರ್ ಸಹಿತ 62 ರನ್ ಬಾರಿಸಿದ ವಿರಾಟ್ ಕೊಹ್ಲಿ ಸಿಕ್ಸರ್ಗಳ ವಿಚಾರದಲ್ಲಿ ಕ್ರಿಸ್ ಗೇಲ್ ದಾಖಲೆಯನ್ನು ಮುರಿದರು.
5 ಸಿಕ್ಸರ್ ಸಹಿತ 62 ರನ್
Pic credit: Google
ಸಿಎಸ್ಕೆ ವಿರುದ್ಧ 5 ಸಿಕ್ಸರ್ ಬಾರಿಸಿದ ಕೊಹ್ಲಿ ಟಿ20ಯಲ್ಲಿ ತಂಡವೊಂದಕ್ಕೆ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸಿಎಸ್ಕೆ ವಿರುದ್ಧ 5 ಸಿಕ್ಸರ್
Pic credit: Google
ಆರ್‌ಸಿಬಿ ಪರ ಆಡುತ್ತಿರುವ ಕೊಹ್ಲಿ 301 ಸಿಕ್ಸರ್ ಬಾರಿಸಿದ್ದು, ಟಿ20ಯಲ್ಲಿ ತಂಡವೊಂದಕ್ಕೆ 300 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಕೊಹ್ಲಿ 301 ಸಿಕ್ಸರ್
Pic credit: Google
ಈ ವಿಷಯದಲ್ಲಿ ಕೊಹ್ಲಿ ಆರ್‌ಸಿಬಿ ಪರ 263 ಸಿಕ್ಸರ್‌ಗಳನ್ನು ಬಾರಿಸಿದ್ದ ಮಾಜಿ ಆಟಗಾರ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿದರು.
ಗೇಲ್ 263 ಸಿಕ್ಸರ್
Pic credit: Google
ಟಿ20ಯಲ್ಲಿ ತಂಡವೊಂದಕ್ಕೆ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಕ್ರಿಸ್ ಗೇಲ್ ಮೊದಲೆರಡು ಸ್ಥಾನಗಳಲಿದ್ದರೆ, ರೋಹಿತ್ ಶರ್ಮಾ 262 ಸಿಕ್ಸರ್‌ಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.