ಮೊದಲ ಎಸೆತದಲ್ಲೇ ಅತಿ ಹೆಚ್ಚು ಸಿಕ್ಸರ್; ದಾಖಲೆ ಬರೆದ ಜೈಸ್ವಾಲ್
25 April 2025
Pic credit: IPL X
By: ಪೃಥ್ವಿ ಶಂಕರ
ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಐಪಿಎಲ್‌ನಲ್ಲಿ ಮೊದಲ ಎಸೆತದಲ್ಲೇ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಯಶಸ್ವಿ ಜೈಸ್ವಾಲ್
Pic credit: IPL X
ಐಪಿಎಲ್ 2025 ರ 42 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯಿತು.
ಆರ್‌ಸಿಬಿ- ಆರ್ಆರ್
Pic credit: IPL X
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 205 ರನ್ ಗಳಿಸಿತು.
205 ರನ್ ಟಾರ್ಗೆಟ್
Pic credit: IPL X
ಈ ಗುರಿ ಬೆನ್ನಟ್ಟಿದ ರಾಜಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಉತ್ತಮ ಆರಂಭ ನೀಡಿದರು.
ಉತ್ತಮ ಆರಂಭ
Pic credit: IPL X
ಭುವನೇಶ್ವರ್ ಕುಮಾರ್ ಬೌಲ್ ಮಾಡಿದ ರಾಜಸ್ಥಾನ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಜೈಸ್ವಾಲ್ ತಂಡಕ್ಕೆ ಸ್ಫೋಟಕ ಆರಂಭ ತಂದುಕೊಟ್ಟರು.
ಮೊದಲ ಎಸೆತದಲ್ಲೇ ಸಿಕ್ಸ್
Pic credit: IPL X
ಇದರೊಂದಿಗೆ, ಐಪಿಎಲ್‌ನಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಅತಿ ಹೆಚ್ಚು ಬಾರಿ ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಸೃಷ್ಟಿಸಿದರು.
ಯಶಸ್ವಿ ದಾಖಲೆ
Pic credit: IPL X
ಐಪಿಎಲ್ ವೃತ್ತಿಜೀವನದಲ್ಲಿ ಯಶಸ್ವಿ ಜೈಸ್ವಾಲ್ ಮೂರು ಬಾರಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದು ಇದು ದಾಖಲೆಯಾಗಿದೆ.