ಅತಿ ಹೆಚ್ಚು ವಿಕೆಟ್; ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಬುಮ್ರಾ

26 December 2024

Pic credit: Google

ಪೃಥ್ವಿ ಶಂಕರ

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐದನೇ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

Pic credit: Google

ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಬುಮ್ರಾ ಈ ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

Pic credit: Google

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದಂದು ಬುಮ್ರಾ, ಹೆಡ್ ಅವರ ವಿಕೆಟ್ ಸೇರಿದಂತೆ ಒಟ್ಟು ಮೂರು ವಿಕೆಟ್‌ಗಳನ್ನು ಪಡೆದರು.

Pic credit: Google

ಇದರೊಂದಿಗೆ, ಬುಮ್ರಾ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ 435 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.

Pic credit: Google

ಈ ಮೂಲಕ ಬುಮ್ರಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 434 ವಿಕೆಟ್‌ಗಳನ್ನು ಪಡೆದಿರುವ ಇಶಾಂತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

Pic credit: Google

ಹಾಗೆಯೇ ಬುಮ್ರಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಐದನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಜಾವಗಲ್ ಶ್ರೀನಾಥ್, ಜಹೀರ್ ಖಾನ್ ಮತ್ತು ಕಪಿಲ್ ದೇವ್ ಮಾತ್ರ ಬುಮ್ರಾಗಿಂತ ಮೇಲಿದ್ದಾರೆ.

Pic credit: Google

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನ ಮೊದಲ ದಿನದಂದು ಬುಮ್ರಾ, ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಅವರ ವಿಕೆಟ್‌ ಪಡೆದರು.

Pic credit: Google

ಕಪಿಲ್ ದೇವ್ ಅವರು 28.83 ಸರಾಸರಿಯಲ್ಲಿ 687 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ, ಕಪಿಲ್ ತಮ್ಮ ವೃತ್ತಿಜೀವನದಲ್ಲಿ 24 ಬಾರಿ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಕಬಳಿಸಿದ್ದಾರೆ.

Pic credit: Google

Pic credit: Google

Pic credit: Google

Pic credit: Google

Pic credit: Google

Pic credit: Google