ಟಿ20 ಕ್ರಿಕೆಟ್ನಲ್ಲಿ ವಿಶೇಷ ಮೈಲಿಗಲ್ಲು ತಲುಪಿದ ಜೋಸ್ ಬಟ್ಲರ್
26 January 2025
Pic credit: Google
ಪೃಥ್ವಿ ಶಂಕರ
ಭಾರತ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ 45 ರನ್ಗಳ ಉತ್ತಮ ಇನ್ನಿಂಗ್ಸ್ ಆಡಿದರು.
Pic credit: Google
ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ಬಟ್ಲರ್, ಎರಡನೇ ಪಂದ್ಯದಲ್ಲಿ ಅರ್ಧಶತಕ ವಂಚಿತರಾದರು.
Pic credit: Google
ಆದಾಗ್ಯೂ, ಈ ಅವಧಿಯಲ್ಲಿ ಬಟ್ಲರ್ ಅಪರೂಪದ ದಾಖಲೆ ಬರೆದಿದ್ದು, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಕೆಲವೇ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ.
Pic credit: Google
ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಬಟ್ಲರ್ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.
Pic credit: Google
ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ 205 ಸಿಕ್ಸರ್ ಬಾರಿಸಿರುವ ಭಾರತದ ರೋಹಿತ್ ಶರ್ಮಾ ಹೆಸರಿನಲ್ಲಿದೆ.
Pic credit: Google
ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ 173 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
Pic credit: Google
ಯುಎಇಯ ಮೊಹಮ್ಮದ್ ವಾಸಿಂ 158 ಸಿಕ್ಸರ್‌ಗಳೊಂದಿಗೆ ಮೂರನೇ ಮತ್ತು ಬಟ್ಲರ್ 151 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.