ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದ 4 ತಂಡಗಳಿವು

06 January 2025

Pic credit: Google

ಪೃಥ್ವಿ ಶಂಕರ

1998 ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಾಗುತ್ತಿದೆ. ಇಲ್ಲಿಯವರೆಗೆ 8 ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಾಗಿದೆ ಆದರೆ ಕೇವಲ 7 ತಂಡಗಳು ಮಾತ್ರ ಪ್ರಶಸ್ತಿ ಗೆಲ್ಲಲು ಶಕ್ತವಾಗಿವೆ.

Pic credit: Google

ಭಾರತ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ಟ್ರೋಫಿಯ ಅತ್ಯಂತ ಯಶಸ್ವಿ ತಂಡಗಳಾಗಿವೆ. ಎರಡೂ ತಂಡಗಳು ತಲಾ 2 ಪ್ರಶಸ್ತಿಗಳನ್ನು ಗೆದ್ದ ದಾಖಲೆ ಹೊಂದಿವೆ.

Pic credit: Google

ಉಳಿದಂತೆ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ ತಲಾ ಒಂದು ಬಾರಿ ಚಾಂಪಿಯನ್ ಆಗಿವೆ.

Pic credit: Google

ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಭಾರತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ಆದರೆ ಕೆಲವು ತಂಡಗಳು ಇಲ್ಲಿಯವರೆಗೆ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.

Pic credit: Google

ಈ ಪಟ್ಟಿಯಲ್ಲಿ ಜಿಂಬಾಬ್ವೆ ಮೊದಲ ಸ್ಥಾನದಲ್ಲಿದ್ದು ಚಾಂಪಿಯನ್ಸ್ ಟ್ರೋಫಿಯಲ್ಲಿ 5 ಬಾರಿ ಭಾಗವಹಿಸಿರುವ ಈ ತಂಡ 9 ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

Pic credit: Google

ಕೀನ್ಯಾ 3 ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದು, ಒಟ್ಟು 5 ಪಂದ್ಯಗಳನ್ನು ಆಡಿದ್ದರೂ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

Pic credit: Google

ನೆದರ್ಲ್ಯಾಂಡ್ಸ್ 2002 ರಲ್ಲಿ 2 ಪಂದ್ಯಗಳನ್ನು ಆಡಿತು. ಆದರೆ ಯಾವುದೇ ಪಂದ್ಯವನ್ನು ಗೆಲ್ಲದೆ ಗುಂಪು ಹಂತದಿಂದ ಹೊರಬಿತ್ತು.

Pic credit: Google

ಅಮೆರಿಕ ತಂಡವು 2004 ರಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯಲ್ಲಿ 2 ಪಂದ್ಯಗಳನ್ನಾಡಿ ಒಂದನ್ನು ಗೆಲ್ಲಲು ಸಾಧ್ಯವಾಗದೆ ಟೂರ್ನಿಯಿಂದ ಹೊರಬಿದ್ದಿತ್ತು.

Pic credit: Google