ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದವರಲ್ಲಿ ಕೊಹ್ಲಿಗೆ ಯಾವ ಸ್ಥಾನ?

24 February 2025

Pic credit: Google

ಪೃಥ್ವಿ ಶಂಕರ

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅದ್ಭುತ ಶತಕ ಸಿಡಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

Pic credit: Google

ಈ ವಿಷಯದಲ್ಲಿ ಕೊಹ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಅವರನ್ನು ಹಿಂದಿಕ್ಕಿದ್ದರು. ಈಗ ಸಚಿನ್ ಮತ್ತು ಶ್ರೀಲಂಕಾದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಕೊಹ್ಲಿಗಿಂತ ಮುಂದಿದ್ದಾರೆ.

Pic credit: Google

ಕೊಹ್ಲಿ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27503 ರನ್‌ಗಳನ್ನು ಗಳಿಸಿದ್ದು, ಈ ಗಣ್ಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ.

Pic credit: Google

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ, ಅವರು 34357 ರನ್ ಗಳಿಸಿದ್ದಾರೆ.

Pic credit: Google

ಎರಡನೇ ಸ್ಥಾನದಲ್ಲಿ ಶ್ರೀಲಂಕಾದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಇದ್ದು, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28016 ರನ್ ಗಳಿಸಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27483 ರನ್ ಗಳಿಸಿದ್ದು, ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

Pic credit: Google

ಐದನೇ ಸ್ಥಾನದಲ್ಲಿ ಮಹೇಲ ಜಯವರ್ಧನೆ ಇದ್ದು, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25957 ರನ್ ಗಳಿಸಿದ್ದಾರೆ.

Pic credit: Google