IND vs SA: ಸೊನ್ನೆ ಸುತ್ತಿ ಬೇಡದ ದಾಖಲೆ ಬರೆದ ಸಂಜು ಸ್ಯಾಮ್ಸನ್

10 November 2024

Pic credit: Google

ಪೃಥ್ವಿ ಶಂಕರ

ಡರ್ಬನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಸಂಜು ಸ್ಯಾಮ್ಸನ್ ಎರಡನೇ ಟಿ20 ಪಂದ್ಯದಲ್ಲಿ ಖಾತೆ ತೆರೆಯದೆ ಔಟಾದರು.

Pic credit: Google

ಇದರೊಂದಿಗೆ ಸ್ಯಾಮ್ಸನ್ ತಮ್ಮ ಹೆಸರಿನಲ್ಲಿ ಅನಗತ್ಯ ದಾಖಲೆ ಬರೆದು ರುತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ ಮತ್ತು ಅಭಿಷೇಕ್ ಶರ್ಮಾ ಅವರ ಕ್ಲಬ್‌ಗೆ ಸೇರಿಕೊಂಡಿದ್ದಾರೆ.

Pic credit: Google

ವಾಸ್ತವವಾಗಿ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸ್ಯಾಮ್ಸನ್, ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ, ಎರಡನೇ ಪಂದ್ಯದಲ್ಲಿ ಸೊನ್ನೆ ಸುತ್ತಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Pic credit: Google

ಸ್ಯಾಮ್ಸನ್​ಗೂ ಮುನ್ನ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರುತುರಾಜ್ ಗಾಯಕ್ವಾಡ್ ಈ ಬೇಡದ ದಾಖಲೆ ಬರೆದಿದ್ದರು.

Pic credit: Google

ಗಾಯಕ್‌ವಾಡ್ ಅಲ್ಲದೆ ಈ ವರ್ಷ ರೋಹಿತ್ ಮತ್ತು ಅಭಿಷೇಕ್ ಕೂಡ ಅಫ್ಘಾನಿಸ್ತಾನ ಮತ್ತು ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಶತಕ ಸಿಡಿಸಿ ನಂತರದ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದರು.

Pic credit: Google

ಇದಲ್ಲದೆ ಸಂಜು ಟಿ20ಯಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ನಾಲ್ಕು ಬಾರಿ ಶೂನ್ಯಕ್ಕೆ ಔಟಾದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Pic credit: Google

ಸ್ಯಾಮ್ಸನ್ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಟಿ20 ಸ್ವರೂಪದಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿದ ಮೊದಲ ಭಾರತೀಯ ಮತ್ತು ವಿಶ್ವದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಆದರೆ ಎರಡನೇ ಪಂದ್ಯದಲ್ಲಿ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ.

Pic credit: Google