ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡಗಳಲ್ಲಿ ಭಾರತಕ್ಕೆ ಯಾವ ಸ್ಥಾನ?

08 December 2024

Pic credit: Google

ಪೃಥ್ವಿ ಶಂಕರ

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡಗಳಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ ಮೊದಲ ಸ್ಥಾನದಲ್ಲಿದ್ದು ಇದುವರೆಗೂ ಈ ತಂಡ 500126 ರನ್ ಗಳಿಸಿದೆ. ಅಲ್ಲದೆ ಇಂಗ್ಲೆಂಡ್ ಮಾತ್ರ ಟೆಸ್ಟ್‌ನಲ್ಲಿ 5 ಲಕ್ಷಕ್ಕೂ ಹೆಚ್ಚು ರನ್ ಗಳಿಸಿದೆ.

Pic credit: Google

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡ ಇದುವರೆಗೆ 4,29,011 ರನ್ ಗಳಿಸಿದೆ.

Pic credit: Google

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡಗಳ ಪೈಕಿ ಭಾರತ ತಂಡ ಮೂರನೇ ಸ್ಥಾನದಲ್ಲಿದ್ದು, ಇದುವರೆಗೆ 278870 ರನ್ ಗಳಿಸಿದೆ.

Pic credit: Google

ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡ ಇದುವರೆಗೆ ಒಟ್ಟು 270429 ರನ್ ಗಳಿಸಿದೆ.

Pic credit: Google

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ತಂಡ ಒಟ್ಟು 218205 ರನ್ ಗಳಿಸಿ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

Pic credit: Google

6ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಟ್ಟು 215535 ರನ್ ಗಳಿಸಿದೆ.

Pic credit: Google

ನ್ಯೂಜಿಲೆಂಡ್ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಒಟ್ಟು 208994 ರನ್ ಕಲೆಹಾಕಿದೆ.

Pic credit: Google

8ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಟ್ಟು 155249 ರನ್ ಬಾರಿಸಿದೆ.

Pic credit: Google

9ನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಟ್ಟು 64850 ರನ್ ಗಳಿಸಿದೆ.

Pic credit: Google