ಏಕದಿನದಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಟಾಪ್ 10 ಬ್ಯಾಟ್ಸ್‌ಮನ್‌ಗಳಿವರು

10 February 2025

Pic credit: Google

ಪೃಥ್ವಿ ಶಂಕರ

ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ 369 ಇನ್ನಿಂಗ್ಸ್‌ಗಳಲ್ಲಿ 351 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Pic credit: Google

ಇಂಗ್ಲೆಂಡ್ ವಿರುದ್ಧ ಅದ್ಭುತ ಶತಕ ಗಳಿಸಿದ ಭಾರತದ ನಾಯಕ ರೋಹಿತ್ ಶರ್ಮಾ, ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ 338 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಕ್ಕೇರಿದ್ದಾರೆ.

Pic credit: Google

ರೋಹಿತ್ ಎರಡನೇ ಸ್ಥಾನಕ್ಕೇರಿದ್ದರಿಂದ, ವಿಂಡೀಸ್‌ನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಸ್ವರೂಪದಲ್ಲಿ ಅವರು 331 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Pic credit: Google

ಶ್ರೀಲಂಕಾದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ಸನತ್ ಜಯಸೂರ್ಯ ಕೂಡ ಸಿಕ್ಸರ್‌ಗಳನ್ನು ಬಾರಿಸುವುದಕ್ಕೆ ಹೆಸರುವಾಸಿಯಾಗಿದ್ದು, 270 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

Pic credit: Google

ತಮ್ಮ ಹೆಲಿಕಾಪ್ಟರ್ ಶಾಟ್ ಮೂಲಕ ಹಲವು ಸಿಕ್ಸರ್‌ಗಳನ್ನು ಬಾರಿಸಿದ್ದ ಭಾರತದ ಮಾಜಿ ನಾಯಕ ಎಂಎಸ್ ಧೋನಿ, ಚೆಂಡನ್ನು 229 ಬಾರಿ ಬೌಂಡರಿ ಗೆರೆ ದಾಟಿಸಿದ್ದಾರೆ.

Pic credit: Google

ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ ಕೂಡ ಇನ್ನೂರಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದು, ಅವರು 220 ಸಿಕ್ಸರ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

Pic credit: Google

'ಮಿಸ್ಟರ್ 360' ಎಂದೇ ಖ್ಯಾತಿ ಪಡೆದ ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ಇಡೀ ಏಕದಿನ ವೃತ್ತಿಜೀವನದಲ್ಲಿ 204 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Pic credit: Google

ಇಂಗ್ಲೆಂಡ್ ತಂಡದ ಹಾಲಿ ಕೋಚ್ ಹಾಗೂ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Pic credit: Google

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದಿರುವ ಸಚಿನ್ ತೆಂಡೂಲ್ಕರ್ ಕೂಡ ಒಟ್ಟು 195 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Pic credit: Google

ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಏಕದಿನದಲ್ಲಿ 190 ಸಿಕ್ಸರ್‌ಗಳೊಂದಿಗೆ 10 ನೇ ಸ್ಥಾನದಲ್ಲಿದ್ದಾರೆ.

Pic credit: Google