ಖೇಲ್ ರತ್ನ ಪ್ರಶಸ್ತಿ ಪಡೆದವರಿಗೆ ಸಿಗುವ ಬಹುಮಾನದ ಮೊತ್ತವೆಷ್ಟು?
02 January 2025
Pic credit: Google
ಪೃಥ್ವಿ ಶಂಕರ
ದೇಶದ ಅತಿದೊಡ್ಡ ಕ್ರೀಡಾ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವವರ ಹೆಸರನ್ನು ಪ್ರಕಟಿಸಲಾಗಿದೆ.
Pic credit: Google
ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ 4 ಆಟಗಾರರ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Pic credit: Google
ಈ ಪ್ರಶಸ್ತಿ ಪಡೆದವರಲ್ಲಿ ಮೊದಲ ಹೆಸರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕಗಳನ್ನು ಗೆದ್ದ ಶೂಟರ್ ಮನು ಭಾಕರ್ ಅವರದ್ದು.
Pic credit: Google
ಸಿಂಗಾಪುರದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಪ್ರಶಸ್ತಿ ಗೆದಿದ್ದ ಯುವ ಚೆಸ್ ಆಟಗಾರ ಡಿ ಗುಕೇಶ್ ಅವರಿಗೂ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
Pic credit: Google
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದ ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Pic credit: Google
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಪ್ರವೀಣ್ ಕುಮಾರ್ ಅವರಿಗೂ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
Pic credit: Google
ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಈ ನಾಲ್ವರು ಟ್ರೋಫಿ ಮತ್ತು ಪ್ರಮಾಣಪತ್ರದೊಂದಿಗೆ ಬಹುಮಾನವಾಗಿ 25 ಲಕ್ಷ ರೂಗಳನ್ನು ಪಡೆಯಲ್ಲಿದ್ದಾರೆ.
Pic credit: Google
ಈ ಮೊದಲು ಈ ಪ್ರಶಸ್ತಿಯ ಬಹುಮಾನದ ಮೊತ್ತವು 7.5 ಲಕ್ಷ ರೂಪಾಯಿಗಳಿತ್ತು. ಆದರೆ 2020 ರಲ್ಲಿ ಅದನ್ನು 25 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.