ತವರಿನಲ್ಲಿ ಶತಕದ ಸಾಧನೆ ಮಾಡಿದ ಮಿಚೆಲ್ ಸ್ಟಾರ್ಕ್

04 November 2024

Pic credit: Google

ಪೃಥ್ವಿ ಶಂಕರ

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

Pic credit: Google

ಕಾಂಗರೂಗಳ ಈ ಗೆಲುವಿನಲ್ಲಿ ತಂಡದ ಹಿರಿಯ ವೇಗಿ ಮಿಚೆಲ್ ಸ್ಟಾರ್ಕ್ ಅವರ ಕೊಡುಗೆ ಅಪಾರವಾಗಿತ್ತು. ಸ್ಟಾರ್ಕ್​ ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಿದರು.

Pic credit: Google

ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸ್ಟಾರ್ಕ್ 33 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಏಕದಿನ ಮಾದರಿಯಲ್ಲಿ ವಿಶೇಷ ಸಾಧನೆ ಮಾಡಿದರು.

Pic credit: Google

ತವರು ನೆಲದಲ್ಲಿ ಏಕದಿನ ಪಂದ್ಯಗಳಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಗೆ ಸ್ಟಾರ್ಕ್ ಸೇರ್ಪಡೆಯಾಗಿದ್ದಾರೆ.

Pic credit: Google

ಆಸ್ಟ್ರೇಲಿಯಾದಲ್ಲಿ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಕಾಂಗರೂ ಬೌಲರ್‌ಗಳ ಪಟ್ಟಿಯಲ್ಲಿ ಬ್ರೆಟ್ ಲೀ ಮೊದಲ ಸ್ಥಾನದಲ್ಲಿದ್ದು, ಅವರು 169 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

Pic credit: Google

ಮತ್ತೊಬ್ಬ ಮಾಜಿ ವೇಗಿ ಗ್ಲೆನ್ ಮೆಕ್‌ಗ್ರಾತ್ 160 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

Pic credit: Google

ಶೇನ್ ವಾರ್ನ್ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನದಲ್ಲಿ 134 ವಿಕೆಟ್ ಪಡೆದರೆ, ಕ್ರೇಗ್ ಮೆಕ್‌ಡರ್ಮಾಟ್ 125 ವಿಕೆಟ್ ಪಡೆದಿದ್ದರು.

Pic credit: Google

ಸ್ಟೀವ್ ವಾ ಮತ್ತು ಸ್ಟಾರ್ಕ್ ಪ್ರಸ್ತುತ ತವರಿನಲ್ಲಿ ತಲಾ 101 ವಿಕೆಟ್‌ಗಳನ್ನು ಪಡೆದಿದ್ದು, ಜಂಟಿಯಾಗಿ ಐದನೇ ಸ್ಥಾನದಲ್ಲಿದ್ದಾರೆ.

Pic credit: Google