ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ವೇಗದ ಬೌಲರ್​ಗಳ ಪಟ್ಟಿ ಇಲ್ಲಿದೆ.

15 November 2023

ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ ಮೊದಲ ವೇಗಿ ಎಂಬ ಖ್ಯಾತಿಗೆ ಶಮಿ ಪಾತ್ರರಾಗಿದ್ದಾರೆ. ಶಮಿ ಕೇವಲ 17 ಪಂದ್ಯಗಳಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ.

ಏಕದಿನ ವಿಶ್ವಕಪ್‌ನಲ್ಲಿ 19 ಪಂದ್ಯಗಳಲ್ಲಿ 50 ವಿಕೆಟ್‌ಗಳನ್ನು ಕಬಳಿಸಿರುವ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಶ್ರೀಲಂಕಾದ ಲಸಿತ್ ಮಾಲಿಂಗ 25 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದರು.

ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ 28 ವಿಶ್ವಕಪ್ ಪಂದ್ಯಗಳಲ್ಲಿ ತಮ್ಮ 50 ವಿಕೆಟ್‌ಗಳನ್ನು ಪೂರೈಸಿದರು.

ಆಸ್ಟ್ರೇಲಿಯಾದ ಗ್ಲೆನ್ ಮೆಕ್‌ಗ್ರಾತ್ ಪ್ರಸ್ತುತ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಆದರೆ ಅವರು 30 ಪಂದ್ಯಗಳಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದರು.

NEXT: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಗೆ ಬಲಿಯಾದ 9 ಬ್ಯಾಟರ್​ಗಳು ಇವರೇ..