ಏಕದಿನ ವಿಶ್ವಕಪ್​ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ.

16 November 2023

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ಟೀಂ ಇಂಡಿಯಾದ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅವರು 2019 ರ ವಿಶ್ವಕಪ್‌ನಲ್ಲಿ 5 ಶತಕಗಳನ್ನು ಬಾರಿಸಿದ್ದರು.

ಶ್ರೀಲಂಕಾದ ಕುಮಾರ ಸಂಗಕ್ಕಾರ 2015ರ ವಿಶ್ವಕಪ್‌ನಲ್ಲಿ ನಾಲ್ಕು ಶತಕಗಳನ್ನು ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದರು.

ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಈ ಬಾರಿಯ ವಿಶ್ವಕಪ್‌ನಲ್ಲಿ 4 ಶತಕಗಳನ್ನು ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಮಾರ್ಕ್ ವಾ 1996 ರ ವಿಶ್ವಕಪ್‌ನಲ್ಲಿ ಮೂರು ಶತಕಗಳನ್ನು ಸಿಡಿಸಿದ್ದರು.

2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದ ಸೌರವ್ ಗಂಗೂಲಿ 3 ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದರು.

ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ 2007 ರಲ್ಲಿ ಮೂರು ಶತಕಗಳನ್ನು ಬಾರಿಸಿದ್ದರು.

ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 2019 ರ ವಿಶ್ವಕಪ್‌ನಲ್ಲಿ 3 ಶತಕಗಳನ್ನು ಸಿಡಿಸಿದ್ದರು.

ನ್ಯೂಜಿಲೆಂಡ್‌ನ ರಚಿನ್ ರವೀಂದ್ರ 2023 ರ ವಿಶ್ವಕಪ್​ನಲ್ಲಿ 3 ಶತಕಗಳನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿರಾಟ್ ಕೊಹ್ಲಿ ಈ ವರ್ಷದ ವಿಶ್ವಕಪ್‌ನಲ್ಲಿ ಇದುವರೆಗೆ ಮೂರು ಶತಕಗಳನ್ನು ಬಾರಿಸಿದ್ದಾರೆ. ಅವರಿಗೆ ಇನ್ನೂ ಒಂದು ಪಂದ್ಯವಿದ್ದೂ ಅದರಲ್ಲೂ ಕೊಹ್ಲಿ ಶತಕ ಸಿಡಿಸಲಿ ಎಂಬುದು ಅಭಿಮಾನಿಗಳ ಆಶಯ.

NEXT: ಸಿಕ್ಸರ್ ಕಿಂಗ್ ರೋಹಿತ್..! ಹಿಟ್​ಮ್ಯಾನ್​ಗಿಲ್ಲ ಸರಿಸಾಟಿ