ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳ ಗೆಲುವು ಸಾಧಿಸಿದೆ.
08 October 2023
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 199 ರನ್ಗಳಿಗೆ ಆಲೌಟ್ ಆಯಿತು.
ಆಸೀಸ್ ಪರ ಆರಂಭಿಕ ಡೇವಿಡ್ ವಾರ್ನರ್ 41 ರನ್ ಹಾಗೂ ಸ್ಟೀವ್ ಸ್ಮಿತ್ 46 ರನ್ ಬಾರಿಸಿದರೆ, ಲಬುಶೇನ್ 27 ರನ್ ಹಾಗೂ ಮಿಚೆಲ್ ಸ್ಟಾರ್ಕ್ 28 ರನ್ಗಳ ಕೊಡುಗೆ ನೀಡಿದರು.
ಟೀಂ ಇಂಡಿಯಾ ಪರ ಜಡೇಜಾ 3 ವಿಕೆಟ್, ಬುಮ್ರಾ ಹಾಗೂ ಕುಲ್ದೀಪ್ ತಲಾ 2 ವಿಕೆಟ್ ಪಡೆದರು. ಉಳಿದಂತೆ ಸಿರಾಜ್, ಪಾಂಡ್ಯ, ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.
ಈ ಗುರಿ ಬೆನ್ನಟ್ಟಿದ ಭಾರತ ಕೇವಲ 2 ರನ್ಗಳಿಗೆ 3 ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭದಲ್ಲೇ ಹಿನ್ನಡೆ ಅನುಭವಿಸಿತು.
ಆದರೆ ಆ ಬಳಿಕ ಜೊತೆಯಾದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ 165 ರನ್ಗಳ ಜೊತೆಯಾಟವಾಡಿದರು.
ಈ ವೇಳೆ ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿ ಸಹಿತ 85 ರನ್ ಬಾರಿಸಿದರು.
ಕೊಹ್ಲಿಗೆ ಸಾಥ್ ನೀಡಿದ ಕೆಎಲ್ ರಾಹುಲ್ 115 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 97 ರನ್ ಬಾರಿಸಿದರು.
ಆದರೆ ಈ ಇಬ್ಬರಿಗೂ ಶತಕ ಬಾರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ 42ನೇ ಓವರ್ನಲ್ಲಿ ಗೆಲುವಿನ ನಗೆ ಬೀರಿತು.
Learn more