ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಇಬ್ಬರು ಭಾರತೀಯರು

14 November 2024

Pic credit: Google

ಪೃಥ್ವಿ ಶಂಕರ

Pic credit: Google

ಮೂರನೇ ಟಿ20ಪಂದ್ಯದಲ್ಲಿ ಭಾರತ, 11 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಮೂಲಕ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿದೆ.

Pic credit: Google

Pic credit: Google

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ ಆರು ವಿಕೆಟ್‌ಗೆ 219 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ 107 ರನ್ ಮತ್ತು ಅಭಿಷೇಕ್ ಶರ್ಮಾ 50 ರನ್ ಗಳಿಸಿದರು.

Pic credit: Google

Pic credit: Google

ಇದಲ್ಲದೇ ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ರಮಣದೀಪ್ ಸಿಂಗ್ ಕೂಡ ಆರು ಎಸೆತಗಳಲ್ಲಿ 15 ರನ್ ಗಳಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಒಂದು ಬೌಂಡರಿ ಮತ್ತು ಸಿಕ್ಸರ್ ಬಾರಿಸಿದರು.

Pic credit: Google

Pic credit: Google

ಈ ಮೂಲಕ ರಮಣದೀಪ್ ಸಿಂಗ್ ಅಂತರಾಷ್ಟ್ರೀಯ ಚೊಚ್ಚಲ ಟಿ20 ಪಂದ್ಯದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

Pic credit: Google

Pic credit: Google

ಈ ಹಿಂದೆ, ಪ್ರಸ್ತುತ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ 2021 ರಲ್ಲಿ ತಮ್ಮ ಚೊಚ್ಚಲ ಟಿ20 ಪಂದ್ಯದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದರು.

Pic credit: Google

Pic credit: Google

ಇನ್ನು ಭಾರತ ನೀಡಿದ 220 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 208 ರನ್ ಗಳಿಸಲಷ್ಟೇ ಶಕ್ತವಾಯಿತು.

Pic credit: Google

Pic credit: Google

ಆಫ್ರಿಕಾ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಮಾರ್ಕೊ ಯಾನ್ಸೆನ್ 17 ಎಸೆತಗಳಲ್ಲಿ 54 ರನ್ ಗಳಿಸಿದರು. ಯಾನ್ಸೆನ್ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿ ಮತ್ತು ಐದು ಸಿಕ್ಸರ್‌ಗಳು ಸೇರಿವೆ.

Pic credit: Google