ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ.
ಕಳಪೆ ಫಾರ್ಮ್ನಲ್ಲಿರುವ ರೋಹಿತ್ ಶರ್ಮಾ ಅಂತಿಮ ಪಂದ್ಯದಿಂದ ಹೊರಗುಳಿದು ಶುಭ್ಮನ್ ಗಿಲ್ಗೆ ಅವಕಾಶ ಮಾಡಿಕೊಂಡಿದ್ದಾರೆ. ಅತ್ತ ರೋಹಿತ್ ಶರ್ಮಾ ಅವರ ಅಲಭ್ಯತೆಯ ನಡುವೆ ಭಾರತ ತಂಡವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ.
ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಗೆದ್ದರೆ ರೋಹಿತ್ ಶರ್ಮಾ ಅವರ ಟೆಸ್ಟ್ ಕೆರಿಯರ್ ಕೊನೆಗೊಳ್ಳುವುದು ಖಚಿತ. ಏಕೆಂದರೆ ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ರೋಹಿತ್ ಶರ್ಮಾ ಅವರಿಗೆ ಟೆಸ್ಟ್ ಕೆರಿಯರ್ ಅಂತ್ಯಗೊಳಿಸಲು ಈಗಾಗಲೇ ಸೂಚಿಸಲಾಗಿದೆ.
ಆದರೆ ರೋಹಿತ್ ಶರ್ಮಾ ಇನ್ನೂ ಸಹ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಇದೀಗ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿದು ಅಚ್ಚರಿ ಮೂಡಿಸಿದ್ದಾರೆ.
ಒಂದು ವೇಳೆ ಟೀಮ್ ಇಂಡಿಯಾ ಕೊನೆಯ ಪಂದ್ಯದಲ್ಲಿ ಗೆದ್ದರೆ ಮತ್ತೆ ರೋಹಿತ್ ಶರ್ಮಾ ಅವರನ್ನು ಟೆಸ್ಟ್ಗೆ ಆಯ್ಕೆ ಮಾಡುವ ಸಾಧ್ಯತೆಯಿಲ್ಲ.
ಅಲ್ಲದೆ ಸಿಡ್ನಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾವನ್ನು ಜಸ್ಪ್ರೀತ್ ಬುಮ್ರಾ ಯಶಸ್ವಿಯಾಗಿ ಮುನ್ನಡೆಸಿದರೆ ಅವರೇ ಮುಂದಿನ ನಾಯಕರಾಗಿಯೂ ಕೂಡ ಆಯ್ಕೆಯಾಗಲಿದ್ದಾರೆ.
ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯವು ರೋಹಿತ್ ಶರ್ಮಾ ಪಾಲಿನ ಕೊನೆಯ ಟೆಸ್ಟ್ ಪಂದ್ಯವಾಗಬಹುದು. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಹಿಟ್ಮ್ಯಾನ್ ಟೆಸ್ಟ್ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ.