ಏಕದಿನ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನೂತನ ದಾಖಲೆ ನಿರ್ಮಿಸಿದ್ದಾರೆ.
09 October 2023
ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕರ ಪೈಕಿ ರೋಹಿತ್ಗೆ ಮೊದಲ ಸ್ಥಾನ.
36 ವರ್ಷ, 162 ದಿನ ವಯಸ್ಸಿನ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಅತ್ಯಂತ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ.
ಈ ಮೂಲಕ ರೋಹಿತ್ ಈ ವಿಚಾರದಲ್ಲಿ ಮಾಜಿ ನಾಯಕರಾದ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಅವರನ್ನು ಹಿಂದಿಕ್ಕಿದ್ದಾರೆ.
ಮೊಹಮ್ಮದ್ ಅಜರುದ್ದೀನ್ (36 ವರ್ಷ, 124 ದಿನ) 1999 ರ ವಿಶ್ವಕಪ್ನಲ್ಲಿ ಭಾರತವನ್ನು ಮುನ್ನಡೆಸಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.
ರಾಹುಲ್ ದ್ರಾವಿಡ್ (34 ವರ್ಷ 71 ದಿನ) 2007 ರ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು.
ಎಸ್ ವೆಂಕಟರಾಘವನ್ (34 ವರ್ಷ 56 ದಿನ) 1979 ರಲ್ಲಿ ಟೀಂ ಇಂಡಿಯಾವನ್ನು ವಿಶ್ವಕಪ್ನಲ್ಲಿ ಮುನ್ನಡೆಸಿದ್ದರು.
ಮಹೇಂದ್ರ ಸಿಂಗ್ ಧೋನಿ (33 ವರ್ಷ 262) 2015 ರಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಐದನೇ ಅತ್ಯಂತ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ