ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತಿದೆ.

01 November 2023

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಮತ್ತು ಸ್ವತಃ ಸಚಿನ್ ತೆಂಡೂಲ್ಕರ್ ಭಾಗವಹಿಸಲಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರ ಈ 22 ಅಡಿ ಎತ್ತರದ ಪ್ರತಿಮೆಯನ್ನು ಮೂಲತಃ ಅಹಮ್‌ನಗರ ಜಿಲ್ಲೆಯ ಕಲಾವಿದ ಪ್ರಮೋದ ಕಾಂಬಳೆ ತಯಾರಿಸಿದ್ದು, ಈ ಪ್ರತಿಮೆಯನ್ನು ಸಚಿನ್ ತೆಂಡೂಲ್ಕರ್ ಸ್ಟ್ಯಾಂಡ್ ಬಳಿ ಸ್ಥಾಪಿಸಲಾಗುವುದು.

ಸಚಿನ್ ತೆಂಡೂಲ್ಕರ್ ಸರಿಯಾಗಿ 10 ವರ್ಷಗಳ ಹಿಂದೆ ಮುಂಬೈನ ತಮ್ಮ ತವರು ಮೈದಾನವಾದ ವಾಂಖೆಡೆಯಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು.

ಈ ಹಿಂದೆ ಸಚಿನ್ ತಮ್ಮ 50ನೇ ಹುಟ್ಟುಹಬ್ಬದಂದು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂದು ಪ್ರತಿಮೆ ಸಿದ್ಧವಾಗಿಲ್ಲದ ಕಾರಣ ದಿನಾಂಕವನ್ನು ಮುಂದೂಡಲಾಗಿತ್ತು.

ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಅವರ ವಿಶ್ವಕಪ್ ಗೆಲ್ಲುವ ಕನಸು 2011 ರಲ್ಲಿ ಇದೇ ವಾಂಖೆಡೆ ಮೈದಾನದಲ್ಲಿ ಈಡೇರಿತ್ತು.

ಸಚಿನ್ ಅವರ ತವರು ನೆಲವಾದ ವಾಂಖೆಡೆಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿ ಭಾರತ ವಿಶ್ವಕಪ್ ಎತ್ತಿ ಹಿಡಿದಿತ್ತು.

ಇಂದು ಅದೇ ಮೈದಾನದಲ್ಲಿ ಸಚಿನ್ ತೆಂಡೂಲ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತಿದ್ದು, ಕಾಕತಾಳೀಯವೆಂಬಂತೆ ಟೀಂ ಇಂಡಿಯಾ ನಾಳೆ ಶ್ರೀಲಂಕಾ ವಿರುದ್ಧ ತಮ್ಮ ವಿಶ್ವಕಪ್ ಪಂದ್ಯವನ್ನು ಇದೇ ಮೈದಾನದಲ್ಲಿ ಆಡಲಿದೆ.