ಭಾರತೀಯ ಟೆನಿಸ್ ಅಂಗಳದ ಧ್ರುವತಾರೆ ಸಾನಿಯಾ ಮಿರ್ಝಾ ಕಂಬ್ಯಾಕ್ ಮಾಡಲು ನಿರ್ಧರಿಸಿದ್ದಾರೆ. ಆದರೆ ಈ ಬಾರಿ ಆಟಗಾರ್ತಿಯಾಗಿ ಅಲ್ಲ.
ರಾಕೆಟ್ ಬದಲು ಮೈಕ್
ಈ ಬಾರಿ ಸಾನಿಯಾ ಮಿರ್ಝಾ ರಾಕೆಟ್ ಬದಲು ಮೈಕ್ ಹಿಡಿಯಲಿದ್ದಾರೆ. ಅಂದರೆ ಕಾಮೆಂಟೇಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.
ಆಸ್ಟ್ರೇಲಿಯಾ ಓಪನ್ಗೆ ಸಿದ್ಧತೆ
ಸಾನಿಯಾ ಮಿರ್ಝಾ ಮುಂಬರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಮೊದಲ ಗ್ರ್ಯಾಂಡ್ ಸ್ಲಾಮ್
ಈ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್ ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ನಡೆಯಲಿದೆ. ಈ ವೇಳೆ ಸಾನಿಯಾ ಕಾಮೆಂಟರಿ ಪ್ಯಾನೆಲ್‌ನ ಭಾಗವಾಗಲಿದ್ದಾರೆ.
ಟೆನಿಸ್ಗೆ ಗುಡ್ ಬೈ
ಭಾರತದ ಮಾಜಿ ವಿಶ್ವದ ನಂಬರ್ ಒನ್ ಆಟಗಾರ್ತಿ ಸಾನಿಯಾ ಮಿರ್ಝಾ 2023 ರಲ್ಲಿ ನಡೆದ ದುಬೈ ಟೆನಿಸ್ ಚಾಂಪಿಯನ್‌ಶಿಪ್ ಮೂಲಕ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ್ದರು.
ವಿಂಬಲ್ಡನ್ ಕ್ವೀನ್
2003ರ ವಿಂಬಲ್ಡನ್ ಚಾಂಪಿಯನ್‌ಶಿಪ್‌ನಲ್ಲಿ ಬಾಲಕಿಯರ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಝಾ ವಿಂಬಲ್ಡನ್ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಟೆನಿಸ್ ತಾರೆ ಎನಿಸಿಕೊಂಡಿದ್ದರು.
ಹಿಂಗಿಸ್ ಕೈ ಹಿಡಿದ ಸಾನಿಯಾ
ಸಾನಿಯಾ ಹಾಗೂ ಮಾರ್ಟಿನಾ ಹಿಂಗಿಸ್ ಜೋಡಿ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಗ್ರ್ಯಾಂಡ್ ಸ್ಲಾಮ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಈ ಜೋಡಿಯು ವಿಂಬಲ್ಡನ್, ಯುಎಸ್ ಓಪನ್ ಮತ್ತು ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
6 ಗ್ರ್ಯಾಂಡ್ ಸ್ಲಾಮ್ ಒಡೆತಿ
ಸಾನಿಯಾ ತಮ್ಮ ವೃತ್ತಿಜೀವನದಲ್ಲಿ ಒಟ್ಟು ಆರು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದೀಗ ಆಸ್ಟ್ರೇಲಿಯನ್ ಓಪನ್ ಮೂಲಕ ಕಾಮೆಂಟೇಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.