ಧೋನಿ-ಪಂತ್ ಫೇಲ್; ಸಂಜು ಸ್ಯಾಮ್ಸನ್ ಪಾಸ್

13 october 2024

Pic credit: Google

ಪೃಥ್ವಿ ಶಂಕರ

Pic credit: Google

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲೆರಡು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲರಾಗಿದ್ದ ಸಂಜು ಸ್ಯಾಮ್ಸನ್​ ಹೈದರಾಬಾದ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

Pic credit: Google

ಹೈದರಾಬಾದ್ ಮೈದಾನದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸಿದ ಸಂಜು 47 ಎಸೆತಗಳಲ್ಲಿ 111 ರನ್ ಗಳಿಸಿದರು.

Pic credit: Google

ಸಂಜು ಸ್ಯಾಮ್ಸನ್ ಅವರ 111 ರನ್‌ಗಳ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದ್ದವು. ಅಂದರೆ ಸಂಜು ಕಲೆಹಾಕಿದ111 ರನ್‌ಗಳಲ್ಲಿ 92 ರನ್‌ಗಳು ಬೌಂಡರಿಗಳ ಮೂಲಕ ಮಾತ್ರ ದಾಖಲಾಗಿವೆ.

Pic credit: Google

ಈ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಸಂಜು ಸ್ಯಾಮ್ಸನ್ ಅಂತಾರಾಷ್ಟ್ರೀಯ ಟಿ20ಯಲ್ಲಿ ಶತಕ ಸಿಡಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡರು. ಧೋನಿ ಮತ್ತು ರಿಷಬ್ ಪಂತ್ ಕೂಡ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

Pic credit: Google

ಇದಲ್ಲದೆ ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಶತಕ ಬಾರಿಸಿದ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಸಂಜು ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ಈ ದಾಖಲೆ ಜೋಶ್ ಇಂಗ್ಲಿಷ್ ಮತ್ತು ಕ್ವಿಂಟನ್ ಡಿ ಕಾಕ್ ಹೆಸರಿನಲ್ಲಿತ್ತು.

Pic credit: Google

ಹಾಗೆಯೇ ಭಾರತದ ಪರ ಅತಿ ವೇಗದ ಶತಕ ಸಿಡಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಸ್ಯಾಮ್ಸನ್ ಪಾತ್ರರಾಗಿದ್ದಾರೆ.ಈ ಹಿಂದೆ ಈ ದಾಖಲೆ ಸೂರ್ಯಕುಮಾರ್ ಹೆಸರಿನಲ್ಲಿತ್ತು.

Pic credit: Google

ಇದೀಗ 40 ಎಸೆತಗಳಲ್ಲಿ ಶತಕ ಬಾರಿಸಿರುವ ಸಂಜು ಎರಡನೇ ಸ್ಥಾನದಲ್ಲಿದ್ದರೆ, 35 ಎಸೆತಗಳಲ್ಲಿ ಶತಕ ಬಾರಿಸಿರುವ ರೋಹಿತ್ ಶರ್ಮಾ ನಂಬರ್ 1 ಸ್ಥಾನದಲ್ಲಿದ್ದಾರೆ.

Pic credit: Google

ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆ ಡೇವಿಡ್ ಮಿಲ್ಲರ್ ಮತ್ತು ರೋಹಿತ್ ಶರ್ಮಾ ಅವರ ಹೆಸರಿನಲ್ಲಿದೆ. ಇಬ್ಬರೂ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

Pic credit: Google

ಜಾನ್ಸನ್ ಚಾರ್ಲ್ಸ್ 39 ಎಸೆತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಸ್ಯಾಮ್ಸನ್ 40 ಎಸೆತಗಳಲ್ಲಿ ಶತಕ ಸಿಡಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.