ಟಿ20 ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಸಂಜು ಸ್ಯಾಮ್ಸನ್‌

16 November 2024

Pic credit: Google

ಪೃಥ್ವಿ ಶಂಕರ

Pic credit: Google

ಟೀಂ ಇಂಡಿಯಾದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ದಕ್ಷಿಣ ಆಫ್ರಿಕಾ ಪ್ರವಾಸವು ಸಾಕಷ್ಟು ಸ್ಮರಣೀಯವಾಗಿದೆ. ಉಭಯ ತಂಡಗಳ ನಡುವೆ ನಡೆದ 4 ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ತಮ್ಮ ರನ್ ಬರ ನೀಗಿಸಿಕೊಂಡಿದ್ದಾರೆ.

Pic credit: Google

Pic credit: Google

ಈ ಸರಣಿಯನ್ನು ಶತಕದೊಂದಿಗೆ ಶುಭಾರಂಭ ಮಾಡಿದ ಸಂಜು ಸ್ಯಾಮ್ಸನ್, ಸರಣಿಯ ಕೊನೆಯ ಪಂದ್ಯದಲ್ಲೂ ಶತಕ ಸಿಡಿಸುವಲ್ಲಿ ಯಶಸ್ವಿಯಾದರು.

Pic credit: Google

Pic credit: Google

ಸರಣಿಯ ಕೊನೆಯ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್, 109 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ಈ ವೇಳೆ ಅವರು 6 ಬೌಂಡರಿ ಹಾಗೂ 9 ಸಿಕ್ಸರ್‌ಗಳನ್ನು ಬಾರಿಸಿದರು.

Pic credit: Google

Pic credit: Google

ಈ ಪ್ರವಾಸಕ್ಕೂ ಮುನ್ನ ಸಂಜು ಸ್ಯಾಮ್ಸನ್ ಬಾಂಗ್ಲಾದೇಶ ವಿರುದ್ಧ ಟಿ20ಯಲ್ಲಿ ಶತಕ ಸಿಡಿಸಿದ್ದರು. ಇದು ಅವರ ಟಿ20 ವೃತ್ತಿ ಜೀವನದ ಮೊದಲ ಶತಕವೂ ಆಗಿತ್ತು.

Pic credit: Google

Pic credit: Google

ಈ ವರ್ಷ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಒಟ್ಟು 3 ಶತಕಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ವಿಶ್ವದಾಖಲೆಯನ್ನೂ ಮಾಡಿದ್ದು, ಒಂದು ವರ್ಷದಲ್ಲಿ 3 ಟಿ20 ಶತಕಗಳನ್ನು ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Pic credit: Google

Pic credit: Google

ಸಂಜು ಸ್ಯಾಮ್ಸನ್ ಕಳೆದ 5 ಇನ್ನಿಂಗ್ಸ್‌ಗಳಲ್ಲಿ ಈ ಮೂರು ಟಿ20 ಶತಕಗಳನ್ನು ಸಿಡಿಸಿರುವುದು ವಿಶೇಷ. ಆದರೆ, ಉಳಿದ 2 ಇನ್ನಿಂಗ್ಸ್‌ಗಳಲ್ಲಿ ಅವರು ಖಾತೆ ತೆರೆಯದೆ ಔಟಾದರು.

Pic credit: Google

Pic credit: Google

ಈ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಒಟ್ಟು 19 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದೂ ಒಂದು ದಾಖಲೆಯಾಗಿದ್ದು, ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಎರಡನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

Pic credit: Google