ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ.
20 October 2023
ಈ ಪಂದ್ಯದಲ್ಲಿ ಶಾಹಿನ್ ಶಾ ಅಫ್ರಿದಿ ಒಂದು ಮೇಡನ್ ಓವರ್ ಬೌಲ್ ಮಾಡಿ 10 ಓವರ್‌ಗಳಲ್ಲಿ 54 ರನ್ ನೀಡಿ ಐದು ವಿಕೆಟ್ ಪಡೆದರು.
ಏಕದಿನ ವಿಶ್ವಕಪ್‌ನಲ್ಲಿ ಶಾಹಿನ್ ಪಂದ್ಯವೊಂದರಲ್ಲಿ ಐದು ವಿಕೆಟ್ ಪಡೆದಿದ್ದು ಇದು ಎರಡನೇ ಬಾರಿ.
2019ರ ವಿಶ್ವಕಪ್‌ನಲ್ಲಿ ಲಾರ್ಡ್ಸ್‌ನಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಾಹಿನ್ ಆರು ವಿಕೆಟ್‌ಗಳನ್ನು ಕಬಳಿಸಿದ್ದರು.
ಇದರೊಂದಿಗೆ ಏಕದಿನ ವಿಶ್ವಕಪ್‌ನಲ್ಲಿ ಎರಡು ಬಾರಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಪಾಕಿಸ್ತಾನದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಶಾಹೀನ್ ಪಾತ್ರರಾಗಿದ್ದಾರೆ.
ಶಾಹೀನ್ ಅವರ ಮಾವ ಶಾಹಿದ್ ಅಫ್ರಿದಿ ಏಕದಿನ ವಿಶ್ವಕಪ್‌ನಲ್ಲಿ ಎರಡು ಬಾರಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಪಾಕಿಸ್ತಾನದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
ಶಾಹಿದ್ 23 ಫೆಬ್ರವರಿ 2011 ರಂದು ಕೀನ್ಯಾ ವಿರುದ್ಧ 8 ಓವರ್‌ಗಳಲ್ಲಿ 16 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಪಡೆದಿದ್ದರು.
ಆ ಬಳಿಕ 2011ರ ವಿಶ್ವಕಪ್‌ನಲ್ಲಿ ಕೆನಡಾ ವಿರುದ್ಧ ಶಾಹಿದ್ 10 ಓವರ್‌ಗಳಲ್ಲಿ 23 ರನ್ ನೀಡಿ ಐದು ವಿಕೆಟ್ ಕಬಳಿಸಿದ್ದರು.
ಇದನ್ನೂ ಓದಿ