ವಿಶ್ವದ ಯಾವ ಮೈದಾನದಲ್ಲಿ ಅತಿ ಹೆಚ್ಚು ಅಂತರಾಷ್ಟ್ರೀಯ ಪಂದ್ಯಗಳು ನಡೆದಿವೆ ಗೊತ್ತಾ?

06 November 2024

Pic credit: Google

ಪೃಥ್ವಿ ಶಂಕರ

ಪ್ರಸ್ತುತ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಯುಎಇಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

Pic credit: Google

ಈ ಸರಣಿಯ ಮೊದಲ ಪಂದ್ಯದೊಂದಿಗೆ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನ ಹೆಸರು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

Pic credit: Google

ವಾಸ್ತವವಾಗಿ ಅತ್ಯಧಿಕ ಅಂತರರಾಷ್ಟ್ರೀಯ ಪಂದ್ಯಕ್ಕೆ ಆತಿಥ್ಯವಹಿಸಿದ ತಂಡಗಳ ಪಟ್ಟಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ಮೊದಲ ಸ್ಥಾನದಲ್ಲಿದೆ.

Pic credit: Google

ಶಾರ್ಜಾ ಕ್ರಿಕೆಟ್ ಸ್ಟೇಡಿಯಂ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿದ ವಿಶ್ವದ ಮೊದಲ ಕ್ರೀಡಾಂಗಣವಾಗಿದೆ. ಇದರಲ್ಲಿ 252 ಏಕದಿನ, 38 ಟಿ20 ಮತ್ತು 10 ಟೆಸ್ಟ್ ಪಂದ್ಯಗಳು ಸೇರಿವೆ.

Pic credit: Google

1984 ರಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಡಲಾಯಿತು. ಈ ಪಂದ್ಯ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದಿತ್ತು.

Pic credit: Google

ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಂತರ, ಈ ಪಟ್ಟಿಯಲ್ಲಿ ಎರಡನೇ ಹೆಸರು ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಗ್ರೌಂಡ್ ಇದೆ. ಈ ಮೈದಾನದಲ್ಲಿ ಇದುವರೆಗೆ 291 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ.

Pic credit: Google

ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇದುವರೆಗೆ 287 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ.

Pic credit: Google

ಅಂದರೆ ಆಸ್ಟ್ರೇಲಿಯದ ಈ ಎರಡು ಐತಿಹಾಸಿಕ ಮೈದಾನಗಳು 300 ಅಂತರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯವಹಿಸಿದ ದಾಖಲೆ ಬರೆದಿವೆ.

Pic credit: Google