ಧೋನಿ ದಾಖಲೆ ಮುರಿಯುವ ಸನಿಹದಲ್ಲಿ ಸೂರ್ಯ

07 october 2024

Pic credit: Google

ಪೃಥ್ವಿ ಶಂಕರ

Pic credit: Google

ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು.

Pic credit: Google

ಈ ಪಂದ್ಯದಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 29 ರನ್ ಕಲೆಹಾಕಿದ ಸೂರ್ಯಕುಮಾರ್, 3 ಸಿಕ್ಸರ್​ಗಳ ನೆರವಿನಿಂದ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

Pic credit: Google

ಟಿ20 ಕ್ರಿಕೆಟ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಸೂರ್ಯಕುಮಾರ್ ಇದೀಗ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಸೂರ್ಯ ಇದುವರೆಗೆ 328 ಸಿಕ್ಸರ್ ಸಿಡಿಸಿದ್ದಾರೆ.

Pic credit: Google

ಇದೀಗ ಸೂರ್ಯನಿಗೆ ಈ ವಿಚಾರದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆ ಮುರಿಯುವ ಅವಕಾಶವಿದೆ.

Pic credit: Google

ಟಿ20 ಕ್ರಿಕೆಟ್‌ನಲ್ಲಿ ಧೋನಿ ತಮ್ಮ ವೃತ್ತಿಜೀವನದಲ್ಲಿ ಒಟ್ಟು 338 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಒಟ್ಟು 328 ಸಿಕ್ಸರ್‌ಗಳೊಂದಿಗೆ ಧೋನಿ ಹಿಂದೆ ಇದ್ದಾರೆ.

Pic credit: Google

ಅಂದರೆ, ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶ ವಿರುದ್ಧ ಇನ್ನೂ 10 ಸಿಕ್ಸರ್ ಬಾರಿಸಿದರೆ, ಈ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಲಿದ್ದಾರೆ.

Pic credit: Google

ಟಿ20ಯಲ್ಲಿ ಗರಿಷ್ಠ ಸಿಕ್ಸರ್‌ಗಳನ್ನು ಬಾರಿಸಿದವರ ಪಟ್ಟಿಯಲ್ಲಿ 525 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ.

Pic credit: Google

ವಿರಾಟ್ 416 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಇನ್ನು ಸೂರ್ಯ ಧೋನಿಯನ್ನು ಹಿಂದಿಕ್ಕಿದರೆ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಲಿದ್ದಾರೆ.