ಸೊನ್ನೆ ಸುತ್ತಿ ರೋಹಿತ್ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್

01 February 2025

Pic credit: Google

ಪೃಥ್ವಿ ಶಂಕರ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸತತ ವೈಫಲ್ಯ ಅನುಭವಿಸಿದ್ದಾರೆ.

Pic credit: Google

ಜುಲೈನಲ್ಲಿ ಟೀಂ ಇಂಡಿಯಾದ ಖಾಯಂ ಟಿ20 ತಂಡದ ನಾಯಕರಾದ ನಂತರ ಸೂರ್ಯಕುಮಾರ್ ಅವರ ಬ್ಯಾಟ್ ಮೌನಕ್ಕೆ ಶರಣಾಗಿದೆ.

Pic credit: Google

ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ, ಅವರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಒಂದೇ ಒಂದು ಪಂದ್ಯದಲ್ಲೂ ಸೂರ್ಯಕುಮಾರ್​ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.

Pic credit: Google

ನಾಲ್ಕನೇ ಟಿ 20 ಪಂದ್ಯದಲ್ಲಿ ಖಾತೆ ತೆರೆಯದೆ ಔಟಾದ ಸೂರ್ಯ, ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಸರಿಗಟ್ಟಿದರು.

Pic credit: Google

ವಾಸ್ತವವಾಗಿ, ನಾಲ್ಕನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 4 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು.

Pic credit: Google

ಈ ಸರಣಿಯಲ್ಲಿ ಎರಡನೇ ಬಾರಿಗೆ ಸೂರ್ಯಕುಮಾರ್​ಗೆ ತಮ್ಮ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ. ಈ ಮೂಲಕ ಟಿ20 ಸರಣಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸೊನ್ನೆ ಸುತ್ತಿದ ಎರಡನೇ ಭಾರತೀಯ ನಾಯಕ ಎಂಬ ಕುಖ್ಯಾತಿಗೆ ಸೂರ್ಯ ಭಾಜನರಾಗಿದ್ದಾರೆ.

Pic credit: Google

ಸೂರ್ಯಕುಮಾರ್​ಗೂ ಮೊದಲು ಈ ದಾಖಲೆ ರೋಹಿತ್ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮತ್ತು 2024 ರಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಎರಡು ಬಾರಿ ಸೊನ್ನೆಗೆ ಔಟಾಗಿದ್ದರು.

Pic credit: Google