ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಟೀಂ ಇಂಡಿಯಾದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

26 October 2023

ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಿರುವ ಭುವಿ ವಿಕೆಟ್​ಗಳ ಬೇಟೆಯಾಡಿದ್ದಾರೆ.

ಈ ಟೂರ್ನಿಯ ಅಂಗವಾಗಿ ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ 5 ವಿಕೆಟ್ ಕಬಳಿಸಿದ್ದಾರೆ.

ಈ ಪಂದ್ಯದಲ್ಲಿ ಭುವನೇಶ್ವರ್ 3.3 ಓವರ್ ಬೌಲ್ ಮಾಡಿ ಕೇವಲ 16 ರನ್ ನೀಡಿ 5 ವಿಕೆಟ್ ಪಡೆದರು.

ಮೊದಲ ಎರಡು ಓವರ್​ಗಳಲ್ಲಿ ವಿಕೆಟ್ ಪಡೆದ ಭುವಿ ಡೆತ್ ಓವರ್​ನಲ್ಲಿ 9 ಎಸೆತಗಳಲ್ಲಿ 5 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿತು.

196 ರನ್​ಗಳ ಬೃಹತ್ ಗುರಿಯೊಂದಿಗೆ ಕಣಕ್ಕೆ ಇಳಿದ ಕರ್ನಾಟಕ 156 ರನ್ ಗಳಿಗೆ ಆಲೌಟ್ ಆಯಿತು.

ಕರ್ನಾಟಕದ ಪರ ಏಕಾಂಗಿ ಹೋರಾಟ ನಡೆಸಿದ ಮಯಾಂಕ್ ಅಗರ್ವಾಲ್ 59 ರನ್​ಗಳ ಇನ್ನಿಂಗ್ಸ್ ಆಡಿದರು.