ಗಂಭೀರ್ ಕೋಚಿಂಗ್‌ನಲ್ಲಿ 7 ಅನಗತ್ಯ ದಾಖಲೆ ಬರೆದ ಟೀಂ ಇಂಡಿಯಾ
20 october 2024
Pic credit: Google
ಪೃಥ್ವಿ ಶಂಕರ
Pic credit: Google
2024ರ ಟಿ20 ವಿಶ್ವಕಪ್ ಬಳಿಕ ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಸುತ್ತಿದ್ದಾರೆ. ಆದರೆ ಅಂದಿನಿಂದ ಟೀಂ ಇಂಡಿಯಾದ ಪ್ರದರ್ಶನದ ಸಾಕಷ್ಟು ಏರಿಳಿತಗಳಾಗಿವೆ.
Pic credit: Google
ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರು ಶ್ರೀಲಂಕಾಕ್ಕೆ ಮೊದಲ ವಿದೇಶಿ ಪ್ರವಾಸ ಮಾಡಿದ್ದರು. ಈ ಪ್ರವಾಸದಲ್ಲಿ 27 ವರ್ಷಗಳ ನಂತರ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತಿತ್ತು.
Pic credit: Google
ಈ ಏಕದಿನ ಸರಣಿಯ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಲೌಟ್ ಆಗಿತ್ತು. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿತ್ತು.
Pic credit: Google
ಕಳೆದ 45 ವರ್ಷಗಳಲ್ಲಿ ಭಾರತ ತಂಡವು ಒಂದು ವರ್ಷದಲ್ಲಿ ಯಾವುದೇ ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿರುವುದು ಇದೇ ಮೊದಲು. ಈ ವರ್ಷ ಕೇವಲ 3 ಏಕದಿನ ಪಂದ್ಯಗಳನ್ನಾಡಿದ್ದ ಭಾರತ, 2 ರಲ್ಲಿ ಸೋತಿದ್ದರೆ, ಒಂದು ಪಂದ್ಯ ಟೈ ಆಗಿತ್ತು.
Pic credit: Google
ಇದೀಗ 36 ವರ್ಷಗಳ ಬಳಿಕ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ 1988ರಲ್ಲಿ ಭಾರತದಲ್ಲಿ ಟೆಸ್ಟ್ ಗೆದ್ದಿತ್ತು.
Pic credit: Google
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 19 ವರ್ಷಗಳ ನಂತರ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನು ಸೋತಿದೆ. ಇದಕ್ಕೂ ಮೊದಲು 2005ರಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಪಾಕಿಸ್ತಾನ ಸೋಲಿಸಿತ್ತು.
Pic credit: Google
ಕಳೆದ 12 ವರ್ಷಗಳಲ್ಲಿ ಭಾರತ ತಂಡ ಒಂದೇ ವರ್ಷದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ತವರಿನಲ್ಲಿ ಸೋತಿರುವುದು ಇದೇ ಮೊದಲು. ನ್ಯೂಜಿಲೆಂಡ್‌ಗೂ ಮುನ್ನ ಈ ವರ್ಷ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿತ್ತು.
Pic credit: Google
ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್ ಆಗಿತ್ತು. ತವರಿನಲ್ಲಿ ಟೀಂ ಇಂಡಿಯಾ 50 ರನ್‌ಗಳಿಗೆ ಆಲೌಟ್ ಆಗಿದ್ದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು.