ಇಲ್ಲಿಯವರೆಗೆ ನಡೆದಿರುವ ಐಸಿಸಿ ಈವೆಂಟ್ ಫೈನಲ್ ಪಂದ್ಯಗಳಲ್ಲಿ ಭಾರತದ ಪ್ರದರ್ಶನ ಹೇಗಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.
17 November 2023
1983ರ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಫೈನಲ್ ಆಡಿದ್ದ ಭಾರತ, ವೆಸ್ಟ್ ಇಂಡೀಸ್ ತಂಡವನ್ನು 43 ರನ್‌ಗಳಿಂದ ಮಣಿಸಿ ವಿಶ್ವಕಪ್ ಎತ್ತಿಹಿಡಿದಿತ್ತು.
ಆ ಬಳಿಕ 2000ನೇ ಇಸವಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 4 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿತ್ತು.
2002 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಳೆಯಿಂದಾಗಿ ಅಂತಿಮ ಫಲಿತಾಂಶ ಹೊರಬೀಳದ ಕಾರಣ ಶ್ರೀಲಂಕಾ ಮತ್ತು ಭಾರತವನ್ನು ಜಂಟಿ ವಿಜೇತ ಎಂದು ಘೋಷಿಸಲಾಯಿತು.
2003ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ 125 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಬೇಕಾಯಿತು.
2007ರಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು 5 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು.
2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಮಣಸಿ ಭಾರತ 2ನೇ ಬಾರಿಗೆ ಏಕದಿನ ಚಾಂಪಿಯನ್ ಆಯಿತು.
2013ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ 5 ರನ್ ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು.
2014ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ 6 ವಿಕೆಟ್‌ಗಳಿಂದ ಸೋತಿತ್ತು.
2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ 180 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು.
2021 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯ ಫೈನಲ್‌ನಲ್ಲಿ ಭಾರತವನ್ನು ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಸೋಲಿಸಿತು.
2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಆವೃತ್ತಿಯ ಫೈನಲ್‌ನಲ್ಲಿ ಆಸ್ಟ್ರೇಲಿಯಾ, ಭಾರತವನ್ನು 209 ರನ್‌ಗಳಿಂದ ಸೋಲಿಸಿತು.
NEXT: ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಒಬ್ಬ ಭಾರತೀಯನೂ ಶತಕ ಬಾರಿಸಿಲ್ಲ..!